ADVERTISEMENT

ನಗರದಲ್ಲಿ ಸಂಭ್ರಮದ ವರಮಹಾಲಕ್ಷ್ಮಿ ಹಬ್ಬ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2019, 15:31 IST
Last Updated 9 ಆಗಸ್ಟ್ 2019, 15:31 IST
ಯಾದಗಿರಿ ನಗರದಲ್ಲಿ ವರಮಹಾಲಕ್ಷ್ಮಿ ಪೂಜೆ ಅಂಗವಾಗಿ ಲಕ್ಷ್ಮಿ ದೇವಸ್ಥಾನದಲ್ಲಿ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು
ಯಾದಗಿರಿ ನಗರದಲ್ಲಿ ವರಮಹಾಲಕ್ಷ್ಮಿ ಪೂಜೆ ಅಂಗವಾಗಿ ಲಕ್ಷ್ಮಿ ದೇವಸ್ಥಾನದಲ್ಲಿ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು   

ಯಾದಗಿರಿ: ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ವರಮಹಾಲಕ್ಷ್ಮಿ ಹಬ್ಬ ನಗರದಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆಯಿಂದಲೇ ನಗರದ ವಿವಿಧೆಡೆ ದೇವಸ್ಥಾನಗಳಲ್ಲಿ ಸಾಮೂಹಿಕ ಪೂಜೆ ನೆರವೇರಿಸಲಾಯಿತು. ಜನ ತಮ್ಮ ತಮ್ಮ ಮನೆಗಳಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಭ್ರಮದಿಂದ ನೆರವೇರಿಸಿದರು.

ಮಹಿಳೆಯರು ಹೊಸ ಬಟ್ಟೆ ಧರಿಸಿ, ಜಗುಲಿಯನ್ನು ಹೂವಿನಿಂದ ಸಿಂಗಾರಗೊಳಿಸಿ ವರಮಹಾಲಕ್ಷ್ಮಿಯನ್ನು ಪ್ರತಿಷ್ಠಾಪಿಸಿ ಸೀರೆ, ತಾಳಿ, ಬಂಗಾರದ ಆಭರಣ, ಹೂಗಳಿಂದ ಅಲಂಕರಿಸಿ, ನೈವೇದ್ಯ ಮಾಡಿ ಅರ್ಪಿಸಿದರು. ಸಂಜೆ ಮುತ್ತೈದೆಯರನ್ನು ಆಮಂತ್ರಿಸಿ ಅರಿಶಿಣ ಕುಂಕುಮ, ಹೂವು, ಹಣ್ಣು ನೀಡುವ ಸಂಪ್ರದಾಯವನ್ನು ಪಾಲಿಸಿಕೊಂಡು ಬಂದರು.

ಹಬ್ಬದ ಪ್ರಯುಕ್ತ ಮಹಿಳೆಯರು ಮನೆಗಳಲ್ಲಿ ಸಿಹಿ ಅಡುಗೆ ಮಾಡಿ, ನೆರೆ ಹೊರೆಯವರಿಗೆ ಹಂಚಿ ಸಂಭ್ರಮಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.