ADVERTISEMENT

ವಿವಿಧ ಜಯಂತಿ: ಸರಳ ಆಚರಣೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 13 ಜನವರಿ 2021, 3:26 IST
Last Updated 13 ಜನವರಿ 2021, 3:26 IST
ಯಾದಗಿರಿಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಮಾತನಾಡಿದರು
ಯಾದಗಿರಿಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಮಾತನಾಡಿದರು   

ಯಾದಗಿರಿ: ಜನವರಿ 14 ರಂದು ಶಿವಯೋಗಿ ಸಿದ್ದರಾಮೇಶ್ವರ, ಜನವರಿ 19 ರಂದು ಮಹಾಯೋಗಿ ವೇಮನ, ಜನವರಿ 21 ರಂದು ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿಗಳನ್ನು ಕೋವಿಡ್-19 ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಮಂಗಳವಾರ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಪ್ರಕಾಶ್ ಜಿ.ರಜಪೂತ್ ಅವರು, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶಿವಯೋಗಿ ಸಿದ್ದರಾಮೇಶ್ವರರ ಜಯಂತಿ ಸೇರಿದಂತೆ ಜನವರಿ ತಿಂಗಳಲ್ಲಿ ನಡೆಯುವ ಎಲ್ಲಾ ಜಯಂತಿಗಳನ್ನು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಗುವುದು ಎಂದರು.

ಈ ಜಯಂತಿಗಳ ಸಂದರ್ಭದಲ್ಲಿ ಯಾವುದೇ ಮೆರವಣಿಗೆಗೆ ಅವಕಾಶ ಇರುವುದಿಲ್ಲ. ಸಮಾಜದ ಮುಖಂಡರ ಸಮ್ಮುಖದಲ್ಲಿ ಕೋವಿಡ್-19 ಸುರಕ್ಷತಾ ಕ್ರಮದೊಂದಿಗೆ ಸರಳವಾಗಿ ಆಚರಿಸಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಹಾಗೂ ಸ್ಯಾನಿಟೈಸರ್ ಉಪಯೋಗಿಸಬೇಕು. ಅಲ್ಲದೆ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಜಯಂತಿಗಳನ್ನು ಆಚರಣೆ ಮಾಡಬೇಕೆಂದು ಹೇಳಿದರು.

ADVERTISEMENT

ಇದೇ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಹಾಗೂ ವಿವಿಧ ಸಮಾಜದ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.