ADVERTISEMENT

ಸುರಪುರ: ಫಲಾನುಭವಿಗೆ ವಾತ್ಸಲ್ಯ ಮನೆ ಹಸ್ತಾಂತರ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2025, 7:03 IST
Last Updated 11 ಡಿಸೆಂಬರ್ 2025, 7:03 IST
ಸುರಪುರ ತಾಲ್ಲೂಕಿನ ಬಿಜಾಸಪುರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹನುಮಂತಿ ಅವರಿಗೆ ವಾತ್ಸಲ್ಯ ಮನೆ ಹಸ್ತಾಂತರಿಸಲಾಯಿತು
ಸುರಪುರ ತಾಲ್ಲೂಕಿನ ಬಿಜಾಸಪುರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹನುಮಂತಿ ಅವರಿಗೆ ವಾತ್ಸಲ್ಯ ಮನೆ ಹಸ್ತಾಂತರಿಸಲಾಯಿತು   

ಸುರಪುರ: ತಾಲ್ಲೂಕಿನ ಬಿಜಾಸಪುರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗ್ರಾಮದ ಮಸಾಶನ ಫಲಾನುಭವಿಯಾದ ಹನುಮಂತಿ ಅವರಿಗೆ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಬುಧವಾರ ವಾತ್ಸಲ್ಯ ಮನೆ ಹಸ್ತಾಂತರಿಸಲಾಯಿತು.

ಟಿಎಪಿಸಿಎಂಎಸ್ ಅಧ್ಯಕ್ಷ ರಾಜಾ ಸಂತೋಷ ನಾಯಕ, ಮಾತನಾಡಿ, ‘ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಬಡ, ನಿರ್ಗತಿಕ ಮಹಿಳೆಯರ ಬದುಕಿನಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದೆ. ಅನೇಕ ಸಾಮಾಜಿಕ ಕಾರ್ಯಕ್ರಮಗಳು ಸಂಸ್ಥೆಯಿಂದ ನಡೆಯುತ್ತಿವೆ. ಸಮಾಜದ ಬಗ್ಗೆ ಅಪಾರ ಕಾಳಜಿ ವಹಿಸಿ ಸಂಸ್ಥೆ ಮಾಡುವ ಕಾರ್ಯಗಳು ಪ್ರೇರಣೆ ಮತ್ತು ಮಾದರಿಯಾಗಿವೆ’ ಎಂದರು.

ಸಂಸ್ಥೆಯ ಯೋಜನಾಧಿಕಾರಿ ನಾಗೇಶ್ ಎನ್.ಪಿ. ಮಾತನಾಡಿ, ‘ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಸಮಾಜದಲ್ಲಿರುವ ಅತಿ ದುರ್ಬಲ ಮತ್ತು ಅಸಹಾಯಕ ಸ್ಥಿತಿಯಲ್ಲಿರುವ ಕುಟುಂಬಗಳನ್ನು ಗುರುತಿಸಿ ಅವರ ಜೀವನ ನಿರ್ವಹಣೆಗೆ ಬೇಕಾದ ಮಾಸಾಶನ ಹಾಗೂ ಅಗತ್ಯಕ್ಕೆ ಅನುಕೂಲವಾಗುವಂತೆ ವಾತ್ಸಲ್ಯ ಕಿಟ್‍ಗಳನ್ನು ಕೊಡುವುದರೊಂದಿಗೆ ಸೂರು ಇಲ್ಲದವರಿಗೆ ಸ್ವಂತ ಸೂರು ನಿರ್ಮಾಣ ಮಾಡಿ ಕೊಡುತ್ತಿದ್ದೇವೆ’ ಎಂದು ಹೇಳಿದರು.

ADVERTISEMENT

ಜಿಲ್ಲಾ ಜನ ಜಾಗೃತಿ ವೇದಿಕೆ ಕೋಶಾಧಿಕಾರಿ ಸೂಗುರೇಶ ವಾರದ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಿಂಗಪ್ಪ ನಾಯಕ ಬಿಜಾಸಪುರ, ಗ್ರಾಮದ ಗಣ್ಯರಾದ ಸಂಗರೆಡ್ಡಿ ಪೊಲೀಸ್ ಪಾಟೀಲ, ಮಡಿವಾಳ ಸಮಾಜದ ಜಿಲ್ಲಾಧ್ಯಕ್ಷ ಮಡಿವಾಳಪ್ಪ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಅನಿತಾ ಬಿರಾದಾರ್, ವಲಯದ ಮೇಲ್ವಿಚಾರಕರು, ಊರಿನ ಪ್ರಮುಖರು, ಒಕ್ಕೂಟದ ಅಧ್ಯಕ್ಷರು, ಸಂಘದ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.