ADVERTISEMENT

‘ವಿದ್ಯಾರ್ಥಿಗಳ ಹೋರಾಟಕ್ಕೆ ಜಯ’

​ಪ್ರಜಾವಾಣಿ ವಾರ್ತೆ
Published 11 ಜುಲೈ 2020, 16:29 IST
Last Updated 11 ಜುಲೈ 2020, 16:29 IST
ಯಾದಗಿರಿಯಲ್ಲಿ ನಿವೃತ್ತಿಯಾದ ಶಿಕ್ಷಕಿ ಮಂಗಳಾ ಬಸವರಾಜ ವಾರದ ದಂಪತಿಯನ್ನು ಸನ್ಮಾನಿಸಲಾಯಿತು
ಯಾದಗಿರಿಯಲ್ಲಿ ನಿವೃತ್ತಿಯಾದ ಶಿಕ್ಷಕಿ ಮಂಗಳಾ ಬಸವರಾಜ ವಾರದ ದಂಪತಿಯನ್ನು ಸನ್ಮಾನಿಸಲಾಯಿತು   

ಯಾದಗಿರಿ: ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ಪದವಿ ಹಾಗೂ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಹೊರತು ಪಡಿಸಿ ಪರೀಕ್ಷೆಯನ್ನು ರದ್ದುಗೊಳಿಸಿ ಸರ್ಕಾರ ಆದೇಶಿಸಿದ್ದು, ಇದು ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಎಚ್‌.ಪಿ.ಸೈದಪ್ಪ, ಕಾರ್ಯದರ್ಶಿ ಬಿ.ಕೆ.ಸುಭಾಷ್ಚಂದ್ರ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಕೊರೊನಾ ಹರಡುವಿಕೆ ಕ್ಷಿಪ್ರಗತಿಯಲ್ಲಿ ಏರುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದು ಅಪಾಯಕಾರಿಯಾಗಿತ್ತು. ಮತ್ತೊಂದೆಡೆ ಬಹುಪಾಲು ಕಾಲೇಜುಗಳಲ್ಲಿ ಪಠ್ಯಕ್ರಮ ಇನ್ನೂಪೂರ್ಣಗೊಂಡಿರಲಿಲ್ಲ. ಆನ್‌ಲೈನ್ ಶಿಕ್ಷಣ ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳನ್ನು ಮಾತ್ರ ತಲುಪಿತ್ತು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದಿದ್ದಾರೆ ಎಂದಿದ್ದಾರೆ.

ಇನ್ನೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸರ್ಕಾರ ಅವರ ಮುಂದಿನ ಜೀವನದ ಸಂಪೂರ್ಣ ಜವಾಬ್ದಾರಿ ವಹಿಸಬೇಕು ಮತ್ತು ಎಲ್ಲಾ ರೀತಿಯ ಮುಂಜಾಗ್ರತೆಯೊಂದಿಗೆ ಪರೀಕ್ಷೆ ನಡೆಸಿ ಅವರಿಗೆ ಉದ್ಯೋಗ ಖಾತ್ರಿ ಪಡಿಸಬೇಕೆಂದು
ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.