ADVERTISEMENT

ಪಂಚ ಗ್ಯಾರಂಟಿ: ಪ್ರಗತಿ ಪರಿಶೀಲನಾ ಸಭೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2026, 6:10 IST
Last Updated 31 ಜನವರಿ 2026, 6:10 IST
ವಡಗೇರಾ ಪಟ್ಟಣದ ತಾಪಂ ಸಭಾಂಗಣದಲ್ಲಿ ಪಂಚ ಗ್ಯಾರೆಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲ್ಲೂಕ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷ ಖಾಜಾ ಮೈನೊದ್ದೀನ್ ಮಿರ್ಚಿ ಮಾತನಾಡಿದರು
ವಡಗೇರಾ ಪಟ್ಟಣದ ತಾಪಂ ಸಭಾಂಗಣದಲ್ಲಿ ಪಂಚ ಗ್ಯಾರೆಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲ್ಲೂಕ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷ ಖಾಜಾ ಮೈನೊದ್ದೀನ್ ಮಿರ್ಚಿ ಮಾತನಾಡಿದರು   

ವಡಗೇರಾ: ‘ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ತಾಲ್ಲೂಕಿನ ಪ್ರತಿ ಗ್ರಾಮದ ಪ್ರತಿಯೊಬ್ಬರಿಗೆ ತಲುಪಿಸಲು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಸಮಿತಿಯ ಸದಸ್ಯರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು’ ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಖಾಜಾ ಮೈನೋದ್ದೀನ್ ಮಿರ್ಚಿ ಹೇಳಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಶುಕ್ರವಾರ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ತಾಲ್ಲೂಕಿನ ವ್ಯಾಪ್ತಿಯಲ್ಲಿ ಸರ್ಕಾರದ ಪಂಚ ಗ್ಯಾರಂಟಿಗಳು ಹಾಗೂ ಯೋಜನೆಗಳು ಯಶಸ್ವಿಯಾಗಬೇಕಾದರೆ ಅಧಿಕಾರಿಗಳು ಪ್ರಾಂಜಲವಾದ ಮನಸ್ಸನಿಂದ ಕಾರ್ಯವನ್ನು ನಿರ್ವಹಿಸಬೇಕು ಆಗ ಮಾತ್ರ ಸರ್ಕಾರಕ್ಕೆ ಹಾಗೂ ಸಮಿತಿಗೆ ಜನರಿಂದ ಗೌರವ ಸಿಗುತ್ತದೆ’ ಎಂದು ಹೇಳಿದರು.

ADVERTISEMENT

ಸಭೆಯಲ್ಲಿ ತಾಪಂ ಇಒ ಮಲ್ಲಿಕಾರ್ಜುನ ಸಂಗ್ವಾರ, ಸಿಡಿಪಿಒ ಮಲ್ಲಣ್ಣ ದೇಸಾಯಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಿತಿಯ ಸದಸ್ಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.