ADVERTISEMENT

ಸಚಿವರು ವಾಸ್ತವ್ಯ ಮಾಡಿದರೂ ಬಾರದ ವಾರ್ಡನ್‌!

​ಪ್ರಜಾವಾಣಿ ವಾರ್ತೆ
Published 3 ಜನವರಿ 2020, 21:17 IST
Last Updated 3 ಜನವರಿ 2020, 21:17 IST
ಬಂದಳ್ಳಿಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ ವಸತಿ ನಿಲಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ವಾಸ್ತವ್ಯ ಮಾಡಿದರು
ಬಂದಳ್ಳಿಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ ವಸತಿ ನಿಲಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ವಾಸ್ತವ್ಯ ಮಾಡಿದರು   

ಯಾದಗಿರಿ: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ತಾಲ್ಲೂಕಿನ ಬಂದಳ್ಳಿಯ ಅಲ್ಪಸಂಖ್ಯಾತರ ಮೆಟ್ರಿಕ್‌ ನಂತರದ ಬಾಲಕರ ವಸತಿ ನಿಲಯದಲ್ಲಿವಾಸ್ತವ್ಯ ಮಾಡಿದರೂಅಲ್ಲಿಗೆ ಬಾರದ ವಾರ್ಡನ್‌ರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಅಲ್ಪ ಸಂಖ್ಯಾತರ ಕಲ್ಯಾಣ ಖಾತೆಯನ್ನೂ ಹೊಂದಿರುವ ಸಚಿವರು ಗುರುವಾರ ರಾತ್ರಿ ಅನಿರೀಕ್ಷಿತವಾಗಿ ವಸತಿ ನಿಲಯಕ್ಕೆ ಭೇಟಿ ನೀಡಿದರು. ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ, ಅವರೊಂದಿಗೆರಾತ್ರಿ ಊಟ ಮಾಡಿದರು.

ಸಚಿವರು ಬಂದಿರುವ ಸುದ್ದಿ ತಿಳಿದು ಜಿಲ್ಲಾಧಿಕಾರಿ ಮತ್ತು ಇತರೆ ಅಧಿಕಾರಿಗಳು ಅಲ್ಲಿಗೆ ದೌಡಾಯಿಸಿದರು.ವಸತಿ ನಿಲಯದಲ್ಲಿ ಸ್ವಚ್ಛತೆಯ ಕೊರತೆ, ಬಿಸಿನೀರು ಹಾಗೂವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶೌಚಾಲಯಗಳ ವ್ಯವಸ್ಥೆ ಇಲ್ಲದಿರುವುದು, ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ವ್ಯವಸ್ಥೆ, ವಿದ್ಯುತ್ ಸಮಸ್ಯೆಯನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ADVERTISEMENT

ವಾರ್ಡನ್‌ ಅನಿಲಕುಮಾರ ಪಾಂಚಾಳ ಗೈರಾಗಿದ್ದರು.ಅವರು ಮೊಬೈಲ್ ಸಂಪರ್ಕಕ್ಕೂ ಸಿಗಲಿಲ್ಲ. ಇದರಿಂದ ಸಿಟ್ಟಾದ ಸಚಿವರು ಅವರ ಅಮಾನತಿಗೆ ಸೂಚಿಸಿದರು.

ಶುಕ್ರವಾರ ಬೆಳಿಗ್ಗೆ ಯೋಗಾಸನ ಮುಗಿಸಿ ವಸತಿ ನಿಲಯದಲ್ಲೇಸ್ನಾನ ಮಾಡಿದ ಸಚಿವರು, ವಿದ್ಯಾರ್ಥಿಗಳ ಜತೆಗೆ ಚಿತ್ರಾನ್ನ ಸೇವಿಸಿ 9.30ರ ಹೊತ್ತಿಗೆ ಯಾದಗಿರಿಗೆ ಬಂದರು.

ಅಮಾನತು: ‘ಮೂರು ವರ್ಷಗಳಿಂದ ಇಲ್ಲಿ ಸೇವೆ ಸಲ್ಲಿಸುತ್ತಿರುವ ವಾರ್ಡನ್‌ಪಾಂಚಾಳ, ಕರ್ತವ್ಯ ಲೋಪ, ಅಶಿಸ್ತಿನ ನಡವಳಿಕೆ, ಉದ್ದೇಶಪೂರ್ವಕವಾಗಿ ಗೈರು ಹಾಗಿರುವುದರಿಂದಶುಕ್ರವಾರ ಜಿಲ್ಲಾಧಿಕಾರಿ ಅಮಾನತು ಆದೇಶ ಹೊರಡಿಸಿದ್ದಾರೆ’ ಎಂದುಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪೂರ್ಣಿಮಾ ಚೂರಿ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.