ನಾರಾಯಣಪುರ: ಒಳಹರಿವು ತಗ್ಗಿದ್ದರಿಂದ ಸೋಮವಾರ ಬಸವಸಾಗರ ಜಲಾಶಯದ 19 ಕ್ರಸ್ಟ್‌ಗೇಟ್‌ಗಳು ಹಾಗೂ ಖಾಸಗಿ ಎಂಪಿಸಿಎಲ್ ಜಲವಿದ್ಯುತ್ ಸ್ಥಾವರದ ಮೂಲಕ ಒಟ್ಟು 49 ಸಾವಿರ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ.
ಸೋಮವಾರ ಬಸವಸಾಗರಕ್ಕೆ ಆಲಮಟ್ಟಿ ಲಾಲ್ ಬಹದ್ದೂರ ಶಾಸ್ತ್ರಿ ಜಲಾಶಯದಿಂದ 65 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿರುವುದರಿಂದ ಬಸವಸಾಗರ ಜಲಾಶಯದಿಂದ 49 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ ಎಂದು ಕೆಬಿಜೆಎನ್ಎಲ್ ಮೂಲಗಳಿಂದ ತಿಳಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.