ADVERTISEMENT

ಕೃಷ್ಣಾ ನದಿಗೆ ನೀರು ಸ್ಥಗಿತ

​ಪ್ರಜಾವಾಣಿ ವಾರ್ತೆ
Published 28 ಜುಲೈ 2020, 16:24 IST
Last Updated 28 ಜುಲೈ 2020, 16:24 IST

ಹುಣಸಗಿ: ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸಲಾಗಿದೆ ಎಂದು ಡ್ಯಾಂ ಡಿವಿಜನ್ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ ನಾಯ್ಕೋಡಿ ತಿಳಿಸಿದ್ದಾರೆ.

ಆಲಮಟ್ಟಿ ಲಾಲ್ ಬಹದ್ದೂರ ಶಾಸ್ತ್ರಿ ಜಲಾಶಯದಿಂದ ಬಸವಸಾಗರ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ತೀರ ಕ್ಷೀಣವಾಗಿದ್ದರಿಂದಾಗಿ ಜಲಾಶಯದ ಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ನೀರನ್ನು ನದಿಗೆ ಹರಿಸಲಾಗುತ್ತಿಲ್ಲ. ಸೋಮವಾರ 7,000 ಕ್ಯೂಸೆಕ್ ಇದ್ದ ಒಳವರಿವು ಮಂಗಳವಾರ 6 ಸಾವಿರ ಕ್ಯುಸೆಕ್ ಗೆ ಕುಸಿದಿದೆ.

492.25 ಮೀಟರ್ ( 33 ಟಿಎಂಸಿ) ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಮಂಗಳವಾರದ ವರೆಗೂ 491.63 ಮೀಟರ್ 30.47 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಅದರಂತೆ ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆಗೆ 6500 ಕ್ಯುಸೆಕ್ ನೀರು ಹರಿಸಲಾಗುತ್ತಿದೆ.

ADVERTISEMENT

ಆದರೂ ಮತ್ತೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಲ್ಲಿ ಮತ್ತೆ ನದಿಗೆ ನೀರು ಹರಿಸಲಾಗುತ್ತದೆ. ಆದ್ದರಿಂದ ನದಿ ತೀರದಲ್ಲಿರುವ ಗ್ರಾಮಗಳ ಜನರು ಎಚ್ಚರಿಕೆಯಿಂದಲೇ ಇರಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.