ಶಹಾಪುರ: ತಾಲ್ಲೂಕಿನ ವಿಭೂತಿ ಹಳ್ಳಿ ಗ್ರಾಮ ಸಮೀಪ ಟಿಪ್ಪರ್ ಲಾರಿ ಡಿಕ್ಕಿಯಾಗಿ ಮಹಿಳೆ ಮೃತಪಟ್ಟಿದ್ದು, ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತ ಮಹಿಳೆ ಭಾಗಮ್ಮ (45) ಟಿಪ್ಪರ್ ಹಿಂಬದಿ ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾರೆ.
ಬೈಕ್ ಸವಾರ ಮಹಾದೇವಪ್ಪ ಸಣ್ಣಪುಟ್ಟ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಲ್ಲೂಕಿನ ಸಗರ ಗ್ರಾಮದವರಾದ ಮಹಾದೇವಪ್ಪ ಅಬ್ಸಿಹಾಳ ಮತ್ತು ಪತ್ನಿ ಭಾಗಮ್ಮ ಬೆಂಗಳೂರಿನಿಂದ ಸಂಕ್ರಾಂತಿ ಹಬ್ಬಕ್ಕೆ ಸ್ವಗ್ರಾಮಕ್ಕೆ ಆಗಮಿಸಿದ್ದರು ಎನ್ನಲಾಗಿದೆ. ಶಹಾಪುರದಲ್ಲಿ ಹಬ್ಬದ ಸಂತೆ ಮಾಡಿಕೊಂಡು ಸಗರ ಗ್ರಾಮಕ್ಕೆ ತೆರಳುತ್ತಿದ್ದರು. ಮಾರ್ಗಮಧ್ಯೆ ದುರ್ಘಟನೆ ನಡೆದಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.