
ಪ್ರಜಾವಾಣಿ ವಾರ್ತೆ
ಶಹಾಪುರ: ಇಲ್ಲಿನ ಇಂದಿರಾನಗರದ ಹೊರವಲಯದಲ್ಲಿ ಬುಧವಾರ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.
ತಾಲ್ಲೂಕಿನ ಗೋಗಿ (ಕೆ) ಗ್ರಾಮದ ಜಯಮ್ಮ ಗಂಡ ಪರಶುರಾಮ ಹೊಸ್ಮನಿ (35) ಎಂದು ಗುರುತಿಸಲಾಗಿದೆ.
‘ಜಯಮ್ಮ ಅವರಿಗೆ ಮೂರು ಜನ ಗಂಡು ಮಕ್ಕಳು ಇದ್ದಾರೆ. ಎರಡು ತಿಂಗಳಿನಿಂದ ಮೂಲವ್ಯಾದಿ ಕಾಯಿಲೆಯಿಂದ ಬಳಲುತ್ತಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಜಯಮ್ಮಳ ಸಹೋದರ (ಅಣ್ಣ) ತಿಮ್ಮಯ್ಯ ಗುಂಕಲಗದೊಡ್ಡಿ ಅವರು ನನ್ನ ಸಹೋದರಿಯ ಸಾವಿನಲ್ಲಿ ಸಂಶಯವಿದೆ ಎಂದು ಶಹಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.