ADVERTISEMENT

ಶಹಾಪುರ | ಕೋವಿಡ್‌ನಿಂದ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2020, 7:55 IST
Last Updated 3 ಆಗಸ್ಟ್ 2020, 7:55 IST
   

ಶಹಾಪುರ (ಯಾದಗಿರಿ ಜಿಲ್ಲೆ): ನಗರದ ಆಸರಾ ಮೊಹಲ್ಲಾದ 52 ವರ್ಷದ ಮಹಿಳೆ ಸೋಮವಾರ ಕೋವಿಡ್-19 ನಿಂದ ಮೃತಪಟ್ಟಿದ್ದಾರೆ.

'ಶಹಾಪುರ ನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ' ಎಂದು ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ.ಮಲ್ಲಪ್ಪ ಕಣಜಿಕರ ತಿಳಿಸಿದ್ದಾರೆ.

'ಜ್ವರ ಬಂದರೂ ಆಸ್ಪತ್ರೆಗೆ ತೋರಿಸಿಕೊಂಡಿಲ್ಲ. ಹೆಚ್ಚಿನ ತೊಂದರೆ ಕಾಣಿಸಿಕೊಂಡಾಗ ಆಸ್ಪತ್ರೆಗೆ ಆಗಮಿಸಿದ್ದರು.
ಆಸ್ಪತ್ರೆಯಲ್ಲಿ ಒಂದು ಗಂಟೆಕಾಲ ಚಿಕಿತ್ಸೆ ನೀಡಿದರೂ ಸ್ಪಂದಿಸಲಿಲ್ಲ' ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ADVERTISEMENT

ಯಾದಗಿರಿ ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ ನಿಂದ 8 ಜನ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.