ಕೆಂಭಾವಿ: ‘ಉದ್ಯೋಗ ಕಂಡುಕೊಳ್ಳುವ ಮೂಲಕ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಬೇಕು’ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಸಹಾಯಕ ನಿರ್ದೇಶಕ ಅಜಿತ್ ನಾಯಕ ಸಲಹೆ ನೀಡಿದರು.
ಪಟ್ಟಣದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯು ಬಸವೇಶ್ವರ ಶಿಕ್ಷಣ ಹಾಗೂ ವಿವಿಧೋದ್ದೇಶ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 25 ಮಹಿಳೆಯರಿಗೆ ಹೊಲಿಗೆ ತರಬೇತಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.
‘ಮಹಿಳೆಯರಿಗೆ ಭಾರತೀಯ ಪರಂಪರೆಯಲ್ಲಿ ಉನ್ನತ ಸ್ಥಾನ ನೀಡಲಾಗಿದೆ. ಆಧುನಿಕ ಯುಗದಲ್ಲಿ ಆವಿಷ್ಕಾರ ಮಾಡುವ ಮಟ್ಟಕ್ಕೆ ಅವರು ಬೆಳೆದಿದ್ದಾರೆ. ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಸ್ವಂತ ಕೆಲಸ ಆರಂಭಿಸಿ ಉದ್ಯಮಶೀಲರಾಗಿ ಮುಂದುವರಿಯಬೇಕು’ ಎಂದರು.
ಪುರಸಭೆ ಅಧ್ಯಕ್ಷೆ ಮಾಸಮ್ಮ ಹಲಗಿ ಕಾರ್ಯಕ್ರಮ ಉದ್ಘಾಟಿಸಿದರು.
ಸಾವಿತ್ರಿ ಕಾಚಾಪುರ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಸೋಫಿಶರಮತ್ ನಾಶಿ ಹಾಗೂ ತರಬೇತಿದಾರರು ಇದ್ದರು.
ಶ್ರೀಶೈಲ್ ಕಾಚಾಪುರ ನಿರೂಪಿಸಿದರು. ರಮೇಶ ಕಾಚಾಪುರ ಸ್ವಾಗತಿಸಿ, ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.