ವಡಗೇರಾ: ‘ಭಾರತ ರತ್ನ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರು ಜಗತ್ತು ಕಂಡ ಮಹಾನ್ ಮಾನವತಾವಾದಿ ಮತ್ತು ಮಾನವೀಯ ತತ್ವಗಳಡಿ ಸಮಾಜ ನಿರ್ಮಾಣಕ್ಕೆ ಹಗಲಿರುಳು ಶ್ರಮಿಸಿದ ಮಹಾನ್ ನಾಯಕರು’ ಎಂದು ತಹಶೀಲ್ದಾರ್ ಶ್ರೀನಿವಾಸ ಚಾಪೆಲ್ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಅಂಬೇಡ್ಕರ್ ಅವರು ಒಂದು ಸಮಾಜಕ್ಕೆ ಸೀಮಿತವಲ್ಲ. ಅವರು ವಿಶ್ವ ಮಾನವರು. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.
ಉಪ ತಹಶೀಲ್ದಾರ್ ಸಂಗಮೇಶ ದೇಸಾಯಿ, ರಾಮನಗೌಡ, ರಾಮುಲು ನಾಯಕ, ಬಸವರಾಜ, ತಿಪ್ಪೇಸ್ವಾಮಿ, ನಹೀಂ ಸಾಬ್, ರವೀಂದ್ರ ನಿಲಹಳ್ಳಿ, ಇಮ್ರಾನ್‌ಖಾನ್, ಸುನಿತಾ ಹೆರುಂಡಿ, ದೇವು ನಾಯಕ, ಖಂಡಪ್ಪ ಮೈಲಾಪುರ, ಪ್ರಸಾದ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.