ADVERTISEMENT

ಯಾದಗಿರಿ: ಜಿಲ್ಲಾಧಿಕಾರಿಗಳಿಂದ ಭುವನೇಶ್ವರಿಗೆ ಪೂಜೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2019, 15:11 IST
Last Updated 1 ನವೆಂಬರ್ 2019, 15:11 IST
ಯಾದಗರಿಯ ಜಿಲ್ಲಾಧಿಕಾರಿ ಕಚೇರಿ ಎದುರು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಧ್ವಜಾರೋಹಣ ನೆರವೇರಿಸಿದರು
ಯಾದಗರಿಯ ಜಿಲ್ಲಾಧಿಕಾರಿ ಕಚೇರಿ ಎದುರು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಧ್ವಜಾರೋಹಣ ನೆರವೇರಿಸಿದರು   

ಯಾದಗಿರಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಜಿಲ್ಲಾಡಳಿತ ಭವನ ಆವರಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ನಂತರ ಮಾತನಾಡಿದ ಅವರು, ‘ಜಿಲ್ಲೆಯ ಎಲ್ಲ ಅಧಿಕಾರಿಗಳು ಕಡತ ಮಂಡಿಸುವಾಗ, ಟಿಪ್ಪಣಿ ಬರೆಯುವಾಗ, ಪತ್ರ ವ್ಯವಹಾರ ಸೇರಿದಂತೆ ಇನ್ನಿತರ ಸಂದರ್ಭಗಳಲ್ಲಿ ಕನ್ನಡ ಭಾಷೆ ಬಳಸುವ ಮೂಲಕ ಆಡಳಿತವನ್ನು ಕನ್ನಡಮಯವಾಗಿಸಬೇಕು. ಅರ್ಜಿ ವಿಲೇವಾರಿಯಲ್ಲಿ ವಿಳಂಬ ನೀತಿ ಅನುಸರಿಸಬಾರದು’ ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಸಿಇಒ ಶಿಲ್ಪಾ ಶರ್ಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಇದ್ದರು.

ಕಾಜಾಗರವಾಡಿ: ಯಾದಗಿರಿ ನಗರದ ಕಿತ್ತೂರು ರಾಣಿ ಚನ್ನಮ್ಮ ಯುವಕರ ಬಳಗ ವತಿಯಿಂದ ಬೆಳಿಗ್ಗೆ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ತಾಯಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು. ರೆಡ್ಡಿ ಮುದ್ನಾಳ, ಕಾರ್ತಿಕ ಪೂಜಾರಿ, ಪವನ ಹೊಸಮನಿ, ನಿಂಗು ನಾಯ್ಕಲ್ ಇದ್ದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.