ADVERTISEMENT

ಯಾದಗಿರಿ: ಫಲಾನುಭವಿಗಳಿಗೆ ಆದೇಶ ಪತ್ರ ವಿತರಿಸಿದ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ

ಖಾನಾಪುರ ಎಸ್.ಎಚ್. ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ, ಜಿಲ್ಲೆಯ ವಿವಿಧೆಡೆ ಅಧಿಕಾರಿಗಳ ವಾಸ್ತವ್ಯ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2021, 8:19 IST
Last Updated 20 ಫೆಬ್ರುವರಿ 2021, 8:19 IST
ಯಾದಗಿರಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಸಸಿಗೆ ನೀರೆರೆಯುವ ಮೂಲಕ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಿದರು
ಯಾದಗಿರಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಸಸಿಗೆ ನೀರೆರೆಯುವ ಮೂಲಕ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಿದರು   

ಯಾದಗಿರಿ: ‘ಜಿಲ್ಲಾಧಿಕಾರಿ ನಡೆ-ಹಳ್ಳಿಯ ಕಡೆ’ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯ ಸುರಪುರ ತಾಲ್ಲೂಕಿನ ಖಾನಾಪುರ ಎಸ್.ಎಚ್. ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿರುವ ಗ್ರಾಮ ವಾಸ್ತವ್ಯದಲ್ಲಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಅವರು ವಿವಿಧ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ವಿತರಿಸಿದರು.

ಪಡಿತರ ಚೀಟಿ ( ಬಿಪಿಎಲ್ ಕಾರ್ಡ್), ಸಂಧ್ಯಾ ಸುರಕ್ಷಾ ಯೋಜನೆಯ ಪಿಂಚಣಿದಾರರಿಗೆ ಆದೇಶಪತ್ರ, ಪಹಣಿ ತಿದ್ದುಪಡಿ ಪತ್ರ ಮುಂತಾದವುಗಳನ್ನು ವಿತರಿಸಿದರು.

ಸುರಪುರ ಶಾಸಕ ರಾಜೂಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪುರ, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ, ಉಪವಿಭಾಗಧಿಕಾರಿ ಶಂಕರಗೌಡ ಸೋಮನಾಳ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ADVERTISEMENT
ಗ್ರಾಮ ವಾಸ್ತವ್ಯದಲ್ಲಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಅವರು ವಿವಿಧ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ವಿತರಿಸಿದರು.

ಇನ್ನು ಜಿಲ್ಲೆಯ ವಿವಿಧೆಡೆಯೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ.

ಯಾದಗಿರಿ ತಾಲ್ಲೂಕಿನ ಲಿಂಗೇರಿ, ಹುಣಸಗಿ ತಾಲ್ಲೂಕಿನ ಹಗರಟಗಿ, ಗುರುಮಠಕಲ್ ತಾಲ್ಲೂಕಿನ ಮಿನಾಸಪುರ, ಶಹಾಪುರ ತಾಲ್ಲೂಕಿನ ಶಿರವಾಳ, ವಡಗೇರಾ ತಾಲ್ಲೂಕಿನ ಬೆಂಡೆಬೆಂಬಳಿ ಬಳಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ.

ಗುರುಮಠಕಲ್ ತಾಲ್ಲೂಕಿನ ಮಿನಾಸಪುರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಂದಾಯ, ಆರೋಗ್ಯ, ಆಹಾರ, ಅರಣ್ಯ, ಆರೋಗ್ಯ ಇಲಾಖೆಗಳ ಸಿಬ್ಬಂದಿ ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.