ADVERTISEMENT

ವಡಗೇರಾ | ’ದಾನಗಳಲ್ಲಿ ಶ್ರೇಷ್ಠ ದಾನ ನೇತ್ರ ದಾನ’

​ಪ್ರಜಾವಾಣಿ ವಾರ್ತೆ
Published 13 ಮೇ 2025, 15:33 IST
Last Updated 13 ಮೇ 2025, 15:33 IST
ವಡಗೇರಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇರುವ ಆಶಾ ಕಿರಣ ದೃಷ್ಟಿ ಕೇಂದ್ರದ ವತಿಯಿಂದ ಫಲಾನುಭವಿಗಳಿಗೆ ಉಚಿತವಾಗಿ ಕನ್ನಡಕ ವಿತರಿಸಲಾಯಿತು
ವಡಗೇರಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇರುವ ಆಶಾ ಕಿರಣ ದೃಷ್ಟಿ ಕೇಂದ್ರದ ವತಿಯಿಂದ ಫಲಾನುಭವಿಗಳಿಗೆ ಉಚಿತವಾಗಿ ಕನ್ನಡಕ ವಿತರಿಸಲಾಯಿತು   

ವಡಗೇರಾ: ದಾನಗಳಲ್ಲಿ ಶ್ರೇಷ್ಠ ದಾನ ನೇತ್ರ ದಾನ. ಪ್ರತಿಯೊಬ್ಬರು ತಮ್ಮ ಕಣ್ಣುಗಳನ್ನು ದಾನ ಮಾಡುವದರಿಂದ ಬೇರೆಯವರ ಜೀವನಕ್ಕೆ ಬೆಳಕಾಗಬೇಕು ಎಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾದ ಜಗನ್ನಾಥರಡ್ಡಿ ಹೇಳಿದರು.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇರುವ ಆಶಾ ಕಿರಣ ದೃಷ್ಟಿ ಕೇಂದ್ರದ ವತಿಯಿಂದ ಫಲಾನುಭವಿಗಳಿಗೆ ಉಚಿತವಾಗಿ ಕನ್ನಡಕ ವಿತರಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರ ಕಣ್ಣುಗಳನ್ನು ರಕ್ಷಿಸಲು ರಾಜ್ಯ ಸರ್ಕಾರವು ಆಶಾ ಕಿರಣ ಯೋಜನೆಯನ್ನು ಜಾರಿಗೆ ತಂದಿದೆ ಇದರ ಸದುಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು. ಈ ಯೋಜನೆ ಅಡಿಯಲ್ಲಿ ಉಚಿತವಾಗಿ ಕಣ್ಣಿನ ತಪಾಸಣೆ, ಕಣ್ಣಿನ ಪೊರೆ ಚಿಕಿತ್ಸೆಗಳನ್ನು ಹಾಗೂ ಕನ್ನಡಕಗಳನ್ನು ವಿತರಿಸುವದರ ಜತೆಗೆ ಕುರುಡುತನಕ್ಕೆ ಚಿಕಿತ್ಸೆನೀಡುವ ಗುರಿಯನ್ನು ಹೊಂದಲಾಗಿದೆ ಎಂದು ತಿಳಿಸಿದರು.

ADVERTISEMENT

ದೂರ ದೃಷ್ಟಿ ಹಾಗೂ ಸಮೀಪ ದೃಷ್ಟಿ ದೋಷಗಳಿಂದ ಬಳಲುತ್ತಿರುವ ಫಲಾನುಭವಿಗಳಿಗೆ ಉಚಿತವಾಗಿ ಕನ್ನಡಕಗಳನ್ನು ನೀಡಲಾಗುತ್ತಿದೆ ಹಾಗೆಯೆ ಕಣ್ಣಿನಲ್ಲಿ ಪೊರೆ ಇರುವ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಶಸ್ತ್ರ ಚಿಕಿತ್ಸೆ ನೀಡಲಾಗುತ್ತದೆ ಎಂದು ಹೇಳಿದರು.

40 ವರ್ಷಕ್ಕೆ ತಲುಪಿರುವ ಪ್ರತಿಯೊಬ್ಬರು ಕಾಲ ಕಾಲಕ್ಕೆ ವೈದ್ಯರನ್ನು ಕಂಡು ತಮ್ಮ ಕಣ್ಣುಗಳನ್ನು ತಪಾಸಣೆ ಮಾಡಿಕೊಳ್ಳಬೇಕು ಇದರಿಂದ ಮುಂಬರುವ ಕುರುಡುತನವನ್ನು ಹಾಗೂ ಇನ್ನಿತರ ಕಣ್ಣಿನ ರೋಗಗಳಿಂದ ಮುಕ್ತಿಯನ್ನು ಹೊಂದಲು ಸಾದ್ಯವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.

ನೇತ್ರ ತಜ್ಷರಾದ ಶ್ರೀನಿವಾಸ ಮಾತನಾಡಿ ಅಂಧತ್ವ ಮುಕ್ತ ರಾಜ್ಯವನ್ನಾಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ದೃಷ್ಟಿ ದೋಷವಿರುವ ಎಲ್ಲಾ ಹಿರಿಯ ನಾಗರಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ಆಶಾ ಕಿರಣ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆಯ ಲಾಭವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಹೇಳಿದರು.

150 ಜನ ಹಿರಿಯ ನಾಗರಿಕರಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ವೆಂಕಟೇಶ, ಮೇಘನಾಥ ಬೆಳ್ಳಿ, ಸಕ್ರೆಪ್ಪ, ಬಸಪ್ಪ ಸಜ್ಜನ, ಫಲಾನುಭವಿಗಳು, ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.