ADVERTISEMENT

ಯಾದಗಿರಿ: 65 ಗ್ರಾಂ ಚಿನ್ನದ ಸರ ಕಳವು

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2023, 7:34 IST
Last Updated 4 ಫೆಬ್ರುವರಿ 2023, 7:34 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಯಾದಗಿರಿ: ನಗರದ ಲಕ್ಷ್ಮೀ ದೇವಸ್ಥಾನದ ಬಳಿ 65 ಗ್ರಾಂ ಚಿನ್ನದ ಸರ ಕಳ್ಳತನ ಆಗಿರುವ ಘಟನೆ ಶುಕ್ರವಾರ ನಡೆದಿದೆ.

ಇಬ್ಬರು ಪಲ್ಸರ್ ಮೋಟರ್ ಸೈಕಲ್ ಮೇಲೆ ಬಂದು ದೇವಸ್ಥಾನದ ಬಳಿ ತೆರಳುತ್ತಿದ್ದ ಮಹಿಳೆಯ ಸರ ಕದ್ದು ಪರಾರಿಯಾಗಿದ್ದಾರೆ.

ಆರೋಪಿಗಳಲ್ಲಿ ಹಿಂದೆ ಕುಳಿತ್ತಿದ್ದ ವ್ಯಕ್ತಿ ಬಿಳಿ ಟಿ-ಶರ್ಟ್ ಮತ್ತು ಕ್ಯಾಪ್ ಹಾಗೂ ಜೀನ್ಸ್ ಪ್ಯಾಂಟ್ ಧರಿಸಿದ್ದು, ಈ ಕುರಿತು ಆರೋಪಿಗಳ ಪತ್ತೆಗಾಗಿ ಯಾದಗಿರಿ ನಗರ ಠಾಣೆ ಅಧಿಕಾರಿ ಸಿಬ್ಬಂದಿ ಹಾಗೂ ಸಿಪಿಐ ಮತ್ತು ಡಿಎಸ್ಪಿ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.