ADVERTISEMENT

ಯಾದಗಿರಿ: ವಿವಿಧೆಡೆ ಬಸವೇಶ್ವರ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2020, 14:34 IST
Last Updated 26 ಏಪ್ರಿಲ್ 2020, 14:34 IST
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಭಾನುವಾರದಂದು ಸರಳ ಹಾಗೂ ಸಾಂಕೇತಿಕವಾಗಿ ಬಸವೇಶ್ವರರ ಜಯಂತಿಯನ್ನು ಆಚರಿಸಲಾಯಿತು.
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಭಾನುವಾರದಂದು ಸರಳ ಹಾಗೂ ಸಾಂಕೇತಿಕವಾಗಿ ಬಸವೇಶ್ವರರ ಜಯಂತಿಯನ್ನು ಆಚರಿಸಲಾಯಿತು.   

ಯಾದಗಿರಿ: ಜಿಲ್ಲಾಧಿಕಾರಿಗಳ ಕಚೇರಿ, ಬಿಜೆಪಿ ಕಾರ್ಯಾಲಯ, ಶಾಸಕ ಕಚೇರಿ ಸೇರಿದಂತೆ ಯಾದಗಿರಿ ನಗರದ ವಿವಿಧೆಡೆ ಭಾನುವಾರದಂದು ವಚನ ಕ್ರಾಂತಿಯ ಹರಿಕಾರ ಬಸವೇಶ್ವರರ 887 ಜಯಂತಿಯನ್ನು ಆಚರಿಸಲಾಯಿತು.

ಜಿಲ್ಲಾಧಿಕಾರಿಗಳ ಕಚೇರಿ: ಲಾಕ್ ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ.ಜಿ.ರಜಪೂತ ಅವರು ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪಾರ್ಚನೆ ಮಾಡುವ ಮೂಲಕ ಸರಳ ಹಾಗೂ ಸಾಂಕೇತಿಕವಾಗಿ ಬಸವ ಜಯಂತಿ ಆಚರಿಸಲಾಯಿತು.

ಬಾಲ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಘುವೀರಸಿಂಗ್ ಠಾಕೂರ್, ವೀರಶೈವ ಸಮಾಜದ ನಗರ ಘಟಕದ ಅಧ್ಯಕ್ಷ ಅಯ್ಯಣ್ಣ ಹುಂಡೇಕರ್, ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ವಿಕ್ರಮ ಸಿಂಗ್ ಠಾಕೂರ್ ಹಾಜರಿದ್ದರು.

ADVERTISEMENT

ಬಿಜೆಪಿ ಕಾರ್ಯಾಲಯ: ನಗರದ ಬಿಜೆಪಿ ಕಾರ್ಯಾಲಯದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶರಣಭೂಪಾಲರೆಡ್ಡಿ ನಾಯ್ಕಲ್ ಅವರು ಬಸವೇಶ್ವರರ ಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ಸಮ ಸಮಾಜದ ನಿರ್ಮಾಣಕ್ಕಾಗಿ, ಅನುಭವ ಮಂಟಪದ ಮೂಲಕ ಬಸವೇಶ್ವರರು ಮಾಡಿದ ಕಾರ್ಯವು ಅನುಕರಣೀಯವಾಗಿದೆ ಎಂದರು.
ನಗರ ಘಟಕದ ಅಧ್ಯಕ್ಷ ಸುರೇಶ ಅಂಬಿಗೇರ, ನಗರಸಭೆ ಸದಸ್ಯರಾದ ಹಣಮಂತ ಇಟಗಿ, ಸ್ವಾಮಿದೇವ ದಾಸನಕೇರಿ, ಮಾರುತಿ ಕಲಾಲ್, ಗೋಪಾಲ ದಾಸನಕೇರಿ, ಶಿವರಾಜ ದಾಸನಕೇರಿ, ವೆಂಕಟರೆಡ್ಡಿ ಅಬ್ಬೆತುಮಕೂರು, ಎಸ್.ಪಿ.ನಾಡೇಕರ್, ಸೂಗೂರೇಶ ಪಾಟೀಲ, ಡಾ.ಶರಣರೆಡ್ಡಿ ಕೋಡ್ಲಾ, ಪ್ರದೀಪ ಪದ್ದಾರ, ಮಹೇಂದ್ರಗೌಡ ಅಳ್ಳಳ್ಳಿ, ಮಲ್ಲು ಚಾಪಲ್, ಹಣಮಂತು ವಲ್ಯಾಪುರೆ, ಪ್ರಜ್ವಲ್ ಇದ್ದರು.

ಶಾಸಕರ ಕಚೇರಿ: ನಗರದ ಯಾದಗಿರಿ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಅವರ ಕಚೇರಿಯಲ್ಲಿ ಪೂಜೆ ಮಾಡಿ, ಪುಷ್ಪಾರ್ಚನೆ ಮಾಡುವ ಮೂಲಕ ಬಸವೇಶ್ವರರ ಜಯಂತಿಯನ್ನು ಆಚರಿಸಲಾಯಿತು. ಮಲ್ಲಣ್ಣಗೌಡ ಹತ್ತಿಕುಣಿ, ಖಂಡಪ್ಪ ದಾಸನ, ವಿಲಾಸ್ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.