ADVERTISEMENT

ಯಾದಗಿರಿ: ಜಿಲ್ಲಾಡಳಿತ ಭವನದ ಸಿಬ್ಬಂದಿಗೆ ಕೊರೊನಾ ವೈರಸ್ ಭೀತಿ

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 7:39 IST
Last Updated 10 ಜುಲೈ 2020, 7:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಯಾದಗಿರಿ: ಇಲ್ಲಿನ ಜಿಲ್ಲಾಡಳಿತ ಭವನದ 20 ಸಿಬ್ಬಂದಿಗೆ ಕೊರೊನಾ ಸೋಂಕು ಪತ್ತೆಯಾಗಿರುವ ಭೀತಿ ಎದುರಾಗಿದ್ದು, ಉನ್ನತ ಅಧಿಕಾರಿಗಳಲ್ಲಿ ಆತಂಕ ಶುರುವಾಗಿದೆ.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ ರಜಪೂತ ಸೇರಿದಂತೆ ಜಿಲ್ಲಾಡಳಿತ ಭವನದ ಅಧಿಕಾರಿಗಳು ಹೋಂ ಕ್ವಾರಂಟೈನ್ ಗೆ ಒಳಗಾಗುವ ಸಾಧ್ಯತೆ ಇದೆ‌.

ಶುಕ್ರವಾರ ಬೆಳಿಗ್ಗೆಯಿಂದಲೇ ಜಿಲ್ಲಾಡಳಿತ ಭವನದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಭವನದ ಎಲ್ಲಾ ಕೊಠಡಿಗಳಿಗೆ ಸ್ಯಾನಿಟೈಸ್ ಸಿಂಪಡಿಸಿದರು. ಉದ್ಯಾನ ವನಗಳಿಗೆ ಕೂಡ ರಾಸಾಯನಿಕ ಸಿಂಪಡಣೆ ಮಾಡಲಾಯಿತು.

ADVERTISEMENT

ಶುಕ್ರವಾರ ಜಿಲ್ಲಾಡಳಿತ ಭವನಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

ಈ ವೇಳೆ ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಪ್ರಭಾರಿ ಪೌರಾಯುಕ್ತ ಬಕ್ಕಪ್ಪ, ಪರಿಸರ ಅಭಿಯಂತರ ಸಂಗಮೇಶ, ಆರೋಗ್ಯ ನಿರೀಕ್ಷಕಿ ಶರಣಮ್ಮ ಸೇರಿದಂತೆ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.