ADVERTISEMENT

ಯಾದಗಿರಿ: ಸರಳ, ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆ ಆಚರಣೆಗೆ ನಿರ್ಧಾರ

75ನೇ ಸ್ವಾತಂತ್ರೋತ್ಸವ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಡಿಸಿ ಮಾಹಿತಿ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2021, 3:12 IST
Last Updated 3 ಆಗಸ್ಟ್ 2021, 3:12 IST
ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಮಾತನಾಡಿದರು
ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಮಾತನಾಡಿದರು   

ಯಾದಗಿರಿ: 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೋವಿಡ್ ಕಾರಣದಿಂದ ಜಿಲ್ಲಾಡಳಿತ ವತಿಯಿಂದ ಸರಳ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಕೋವಿಡ್ ಮೂರನೇ ಅಲೆ ಹಿನ್ನೆಲೆಯಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಸ್ವಾತಂತ್ರ್ಯ ಆಚರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ADVERTISEMENT

ಸ್ವಾತಂತ್ರೋತ್ಸವನ್ನು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತ ವತಿಯಿಂದ ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಜಿ.ಪಂ ಸಿಇಒ ಶಿಲ್ಪಾಶರ್ಮಾ, ಎಸ್ಪಿ ಸಿ.ಬಿ.ವೇದಮೂರ್ತಿ, ಜಿ.ಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಉಪವಿಭಾಗಾಧಿಕಾರಿ ಪ್ರಶಾಂತ ಹನಗಂಡಿ, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಸುರಪುರ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಯೋಜನಾ ನಿರ್ದೇಶಕ ಸಲಾಂ ಹುಸೇನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ, ಶಿಕ್ಷಣ ಇಲಾಖೆ ಉಪನಿರ್ದೇಶಕ ಶಾಂತಗೌಡ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.