ಹುಣಸಗಿ: ಬೆಂಡೆಬೆಂಬಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕಿ ವಿಜಯಲಕ್ಷ್ಮಿ ಶ್ರೀನಿವಾಸ ಅವರು ಈಚೆಗೆ ನಿಧನರಾಗಿದ್ದು, ಅವರ ಕುಟುಂಬಕ್ಕೆ ಜಿಲ್ಲೆಯ ಜಿಲ್ಲೆಯ ಮೊರಾರ್ಜಿ ದೇಸಾಯಿ ಶಾಲೆಯ ಶಿಕ್ಷಕರು ನೆರವಾಗಿದ್ದಾರೆ ಎಂದು ಜಿಲ್ಲೆಯ ಮೊರಾರ್ಜಿ ದೇಸಾಯಿ ಶಾಲೆಯ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ರಾಜನಕೋಳೂರ ತಿಳಿಸಿದ್ದಾರೆ.
ಶಿಕ್ಷಕಿ ವಿಜಯಲಕ್ಷ್ಮಿ ಶ್ರೀನಿವಾಸ ಅವರು ಕಳೆದ 10 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಕಳೆದ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಆದ್ದರಿಂದ ಅವರ ಕುಟುಂಬಕ್ಕೆ ಸಹಕಾರಿಯಾಗಲಿ ಎಂದು ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು, ಬೋಧಕ–ಬೋಧಕೇತರ ಸಂಘದಿಂದ ₹ 1 ಲಕ್ಷ ನೆರವು ನೀಡಲಾಗಿದೆ. ಈ ಹಣವನ್ನು ಅವರ ಪುತ್ರ ಅಕ್ಷಯಗೌಡ ಹೆಸರಿನಲ್ಲಿ ಶಹಾಪುರ ಅಂಚೆ ಕಚೇರಿಯಲ್ಲಿ ಠೇವಣಿ ಇಡಲಾಯಿತು ಎಂದು ಅವರು ಹೇಳಿದ್ದಾರೆ.
ರೇವಣಿ ಇಡುವ ಸಂದರ್ಭದಲ್ಲಿ ಸಂಘದ ಪ್ರಮುಖರಾದ ಸುಭಾಸ ನಾಯಕ, ಆನಂದ ಬಡಿಗೇರ, ರಾಜೇಶ್ವರಿ ಹಿರೇಮಠ, ಮಡಿವಾಳಪ್ಪ ಪಾಟೀಲ, ಸೇರಿ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.