ADVERTISEMENT

ಗೃಹ ದಿಗ್ಬಂಧನ ಉಲ್ಲಂಘನೆ: 3 ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 2 ಜುಲೈ 2020, 17:04 IST
Last Updated 2 ಜುಲೈ 2020, 17:04 IST

ಯಾದಗಿರಿ: ಹೊರ ರಾಜ್ಯದಿಂದ ಆಗಮಿಸಿದ ವಲಸೆಗಾರರಿಗೆ ಗೃಹ ದಿಗ್ಬಂಧನದಲ್ಲಿ ಇರುವಂತೆ ಸೂಚನೆ ನೀಡಿದರೂ ಸರ್ಕಾರದ ಆದೇಶ ಪಾಲಿಸದೆ ಹೊರಗಡೆ ತಿರುಗಾಡುವುದು ಕಂಡುಬಂದಿದ್ದು, ಜಿಲ್ಲೆಯ ಕೆಂಭಾವಿ ಲಕ್ಷ್ಮಿ ನಗರ, ಏವೂರು ತಾಂಡಾ (ಬಿ) ಹಾಗೂ ಹೈಯ್ಯಾಳ (ಕೆ) ಗ್ರಾಮಗಳ ವ್ಯಕ್ತಿಗಳ ವಿರುದ್ಧ ಮೂರು ಪ್ರಕರಣ ದಾಖಲಾಗಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ತಿಳಿಸಿದ್ದಾರೆ.

ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ನಿಗದಿತ ಅವಧಿ ಮುಕ್ತಾಯಗೊಂಡ ನಂತರ ಕೇಂದ್ರ/ ರಾಜ್ಯ ಸರ್ಕಾರದ ಮಾರ್ಗಸೂಚಿ ಹಾಗೂ ಶಿಷ್ಟಾಚಾರದಂತೆ ಸ್ಟ್ಯಾಂಪಿಂಗ್ ಮತ್ತು ಹೆಲ್ತ್ ಸ್ಕ್ರೀನಿಂಗ್ ಮಾಡಿ ಗೃಹ ದಿಗ್ಬಂಧನಕ್ಕಾಗಿ ಕಳುಹಿಸಲಾಗುತ್ತಿದೆ. ಆದರೆ, ಕೆಂಭಾವಿಯ ಲಕ್ಷ್ಮಿ ನಗರದಲ್ಲಿ ಮತ್ತು ಏವೂರು ತಾಂಡಾ (ಬಿ) ಗೃಹ ದಿಗ್ಬಂಧನದಲ್ಲಿರುವ ವಲಸೆಗಾರರು ಮನೆ ಬಿಟ್ಟು ಹೊರಗಡೆ ತಿರುಗಾಡುವುದು ಕಂಡುಬಂದಿದೆ. ಹೀಗಾಗಿ ಇವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಮೂರು ಪ್ರಕರಣಗಳು ತನಿಖೆ ಹಂತದಲ್ಲಿರುತ್ತವೆ. ಈ ಆರೋಪಿಗಳನ್ನು ಪುನಃ ಸಾಂಸ್ಥಿಕ ದಿಗ್ಬಂಧನದ ಅವಲೋಕನೆಗಾಗಿ ಇರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT