ಯಾದಗಿರಿ: ಜಿಲ್ಲೆಯಲ್ಲಿ ಮಂಗಳವಾರ ಇಬ್ಬರಿಗೆ ಕೋವಿಡ್–19 ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 941ಕ್ಕೆ ಏರಿಕೆಯಾಗಿದೆ.
ಗುರುಮಠಕಲ್ ಹರಿಜನವಾಡದ 50 ವರ್ಷದ ಪುರುಷ (ಪಿ-14,671), ಗುರುಮಠಕಲ್ ತಾಲ್ಲೂಕಿನ ಅನಪುರ ಗ್ರಾಮದ 40 ವರ್ಷದ ಪುರುಷ (ಪಿ-14,672) ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಪಿ-14,671ರ ವ್ಯಕ್ತಿಯ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಮತ್ತೊಬ್ಬರು ತೆಲಂಗಾಣ ರಾಜ್ಯದ ಹೈದರಾಬಾದ್‌ನಿಂದ ಜಿಲ್ಲೆಗೆ ಬಂದಿದ್ದಾರೆ.
14 ಜನ ಗುಣಮುಖ:ಜಿಲ್ಲೆಯಲ್ಲಿ ಕೋವಿಡ್-19 ದೃಢಪಟ್ಟ 941 ವ್ಯಕ್ತಿಗಳ ಪೈಕಿ ಮಂಗಳವಾರ ಮತ್ತೆ 14 ಜನ ಗುಣಮುಖರಾಗಿದ್ದಾರೆ. ಜೂನ್ 30ರವರೆಗೆ 837 ಜನ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. 103 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ 80 ಕಂಟೇನ್‍ಮೆಂಟ್ ಝೋನ್‍ಗಳನ್ನು ರಚಿಸಲಾಗಿದ್ದು, ಇದರಲ್ಲಿ 3 ಕಂಟೇನ್ಮೆಂಟ್ ಝೋನ್‍ಗಳನ್ನು ತೆರವುಗೊಳಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 32 ಜನ, ಶಹಾಪುರ, ಸುರಪುರ, ಬಂದಳ್ಳಿ ಏಕಲವ್ಯ ಕೊರೊನಾ ಕೇರ್ ಸೆಂಟರ್‌ಲ್ಲಿ 73 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.