ADVERTISEMENT

ಯಾದಗಿರಿ: ಜಿಲ್ಲಾ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಸಭೆ, ಮುಂಜಾಗ್ರತಾ ಕ್ರಮಗಳ ಚರ್ಚೆ

​ಪ್ರಜಾವಾಣಿ ವಾರ್ತೆ
Published 12 ಮೇ 2020, 16:43 IST
Last Updated 12 ಮೇ 2020, 16:43 IST
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಸ್.ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಸಭೆ ಜರುಗಿತು
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಸ್.ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಸಭೆ ಜರುಗಿತು   

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್-19 ತಡೆಗಟ್ಟಲು ತೆಗೆದುಕೊಂಡಿರುವ ಹಾಗೂ ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಎಸ್.ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಸಭೆ ಜರುಗಿತು.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅವರು ಕೊರೊನಾ ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ವಿವರಿಸಿದರು. ಹೊರ ರಾಜ್ಯಗಳಿಂದ ಜಿಲ್ಲೆಗೆ ಮರಳುತ್ತಿರುವ ಕಾರ್ಮಿಕರನ್ನು ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿ ಇರಿಸಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಗಳನ್ವಯ ಇವರ ಮಾದರಿಗಳನ್ನು ಸಂಗ್ರಹಿಸಿ ಕೋವಿಡ್-19 ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ನಾಮದೇವ ಕೆ.ಸಾಲಮಂಟಪಿ, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ್ ಅರ್ಜುನ ಬನಸೋಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.