ADVERTISEMENT

ಯಾದಗಿರಿ: ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ, ಸಿಬ್ಬಂದಿ

ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿ ಮೇಲೆ ಲೋಕಾಯಯಕ್ತ ಪೊಲೀಸರ ದಾಳಿ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2023, 7:24 IST
Last Updated 4 ಫೆಬ್ರುವರಿ 2023, 7:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಯಾದಗಿರಿ: ನಗರದ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧಿನಾಧಿಕಾರಿ ಕಚೇರಿ ಮೇಲೆ ಶುಕ್ರವಾರ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಕೆಬಿಜೆಎನ್ಎಲ್ ವಿಶೇಷ ತಹಶೀಲ್ದಾರ್‌ ರವಿ, ರಾಷ್ಟ್ರೀಯ ಹೆದ್ದಾರಿ ಸಿಬ್ಬಂದಿ ಸೈಯದ್ ಖಾದ್ರಿ ಹಾಗೂ ಪೂರ್ಖಾನ್ ಬಲೆಗೆ ಬಿದ್ದಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮೀನು ಕಳೆದುಕೊಂಡ ರೈತನಿಗೆ ಪರಿಹಾರದ ಚೆಕ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ₹10 ಸಾವಿರ ಮುಂಗಡವಾಗಿ ಪಡೆದು ಇನ್ನುಳಿದ ₹5 ಸಾವಿರ ಲಂಚ ಪಡೆಯುವಾಗ ಅಧಿಕಾರಿ ಮತ್ತು ಸಿಬ್ಬಂದಿ ಬಲೆಗೆ ಬಿದ್ದಿದ್ದಾರೆ.

ಜಿಲ್ಲೆಯ ವಡಗೇರಾ ತಾಲ್ಲೂಕಿನ ಬೆಂಡೆಬೆಂಬಳಿ ಗ್ರಾಮದ ಖತಾಲಸಾಬ್ ಎಂಬ ರೈತ ಸೂರತ್-ಚೆನ್ನೈ ಎಕ್ಸ್‌ಪ್ರೆಸ್‌ ವೇ ಯೋಜನೆಯಡಿ ಎರಡು ಎಕರೆ ಭೂಮಿ ಕಳೆದುಕೊಂಡಿದ್ದರು. ₹20 ಲಕ್ಷ ಪರಿಹಾರ ಪಡೆದಿದ್ದ ರೈತ, ಇನ್ನುಳಿದ ₹20 ಲಕ್ಷ ಚೆಕ್ ನೀಡಲು ಹಣದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ADVERTISEMENT

ಲೋಕಾಯುಕ್ತ ಎಸ್ಪಿ ಅಬ್ದುಲ್ ರೌಫ್ ಸೂಚನೆ ಮೇರೆಗೆ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.