ADVERTISEMENT

ಆನ್‌ಲೈನ್‌ ತರಗತಿ ಆಧಾರದಮೇಲೆ ಪರೀಕ್ಷೆಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 10 ಜೂನ್ 2020, 15:54 IST
Last Updated 10 ಜೂನ್ 2020, 15:54 IST
ಆನ್‌ಲೈನ್ ತರಗತಿಗಳ ಆಧಾರದ ಮೇಲೆ ಪರೀಕ್ಷೆ ನಡೆಸುವುದನ್ನು ವಿರೋಧಿಸಿ ಎಐಡಿಎಸ್‍ಒ ಪದಾಧಿಕಾರಿಗಳು ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿದರು
ಆನ್‌ಲೈನ್ ತರಗತಿಗಳ ಆಧಾರದ ಮೇಲೆ ಪರೀಕ್ಷೆ ನಡೆಸುವುದನ್ನು ವಿರೋಧಿಸಿ ಎಐಡಿಎಸ್‍ಒ ಪದಾಧಿಕಾರಿಗಳು ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿದರು   

ಯಾದಗಿರಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಆನ್‌ಲೈನ್ ತರಗತಿಗಳ ಆಧಾರದ ಮೇಲೆ ಪರೀಕ್ಷೆ ನಡೆಸುತ್ತಿರುವುದಕ್ಕೆ ಎಐಡಿಎಸ್‍ಒ ವಿರೋಧ ವ್ಯಕ್ತಪಡಿಸಿದೆ.

‌ಈ ಕುರಿತು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಪಿ.ಸೈದಪ್ಪ ಮಾತನಾಡಿ, ‘ಆನ್‌ಲೈನ್ ತರಗತಿಗಳ ಆಧಾರದ ಮೇಲೆ ನಡೆಸುವ ಪರೀಕ್ಷೆ ತಾರತಮ್ಯದಿಂದ ಕೂಡಿರುವ ಸಾಧ್ಯತೆ ಇದೆ. ಇದು ಬಡ, ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯವನ್ನು ಅಪಾಯಕ್ಕೆ ಒಡ್ಡುವ ಸಾಧ್ಯತೆ ಇದೆ. ಆದ್ದರಿಂದ ವಿಶ್ವವಿದ್ಯಾಲಯ ಶಿಕ್ಷಣ ತಜ್ಞರು, ಉಪನ್ಯಾಸಕರು, ವಿದ್ಯಾರ್ಥಿ ಸಂಘಟನೆಗಳು, ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವ ಮೂಲಕ ಪರೀಕ್ಷೆಯ ವೇಳಾಪಟ್ಟಿ ರೂಪಿಸಬೇಕು’ ಎಂದು ಒತ್ತಾಯಿಸಿದರು.

‘ಎಂಜಿನಿಯರಿಂಗ್ ಪ್ರಾಯೋಗಿಕ ವಿಧಾನದಿಂದ ಕಲಿಯಬೇಕಾದ ಅನ್ವಯಿಕ ವಿಜ್ಞಾನ. ಈ ನಿಟ್ಟಿನಲ್ಲಿ ಆನ್‌ಲೈನ್ ತರಗತಿಗಳು ಸಮಗ್ರ ಜ್ಞಾನ ನೀಡುವುದು ಅಸಾಧ್ಯ ಮತ್ತು ಇದು ಭವಿಷ್ಯದ ಎಂಜಿನಿಯರ್‌ಗಳನ್ನು ರೂಪಿಸುವ ಸಾಧನವಲ್ಲ’ ಎಂದು ಅವರು ಹೇಳಿದರು.

ಎಐಡಿಎಸ್‍ಒ ಜಿಲ್ಲಾ ಕಾರ್ಯದರ್ಶಿ ಬಿ.ಕೆ.ಸುಭಾಸ್‌ಚಂದ್ರ, ಮರೆಮ್ಮ, ನಿಂಗಮ್ಮ, ಬಸವರಾಜ, ನಿಖಿಲ್, ರಮೇಶ ಮುದ್ದಾ, ಭೀಮರಾಯ, ರವಿ, ಎಂಜನಿಯರಿಂಗ್‌ ವಿದ್ಯಾರ್ಥಿಗಳು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.