ADVERTISEMENT

ಯಾದಗಿರಿ: ನಿವೇಶನ ರಹಿತರಿಗೆ ನಿವೇಶನ ಕಲ್ಪಿಸಲು ಒತ್ತಾಯ 

ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆ ವತಿಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2025, 6:02 IST
Last Updated 25 ಡಿಸೆಂಬರ್ 2025, 6:02 IST
ಯಾದಗಿರಿ ನಗರದ ಸ್ಲಂ ಪ್ರದೇಶಗಳನ್ನು ಅಧಿಕೃತವಾಗಿ ಘೋಷಿಸಬೇಕು ಹಾಗೂ  ನಿವೇಶನ ರಹಿತರಿಗೆ ತಕ್ಷಣ ನಿವೇಶನ ಕಲ್ಪಿಸಬೇಕು ಎಂದು ಆಗ್ರಹಿಸಿ ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆ ಪ್ರತಿಭಟನೆ ನಡೆಸಿದರು
ಯಾದಗಿರಿ ನಗರದ ಸ್ಲಂ ಪ್ರದೇಶಗಳನ್ನು ಅಧಿಕೃತವಾಗಿ ಘೋಷಿಸಬೇಕು ಹಾಗೂ  ನಿವೇಶನ ರಹಿತರಿಗೆ ತಕ್ಷಣ ನಿವೇಶನ ಕಲ್ಪಿಸಬೇಕು ಎಂದು ಆಗ್ರಹಿಸಿ ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆ ಪ್ರತಿಭಟನೆ ನಡೆಸಿದರು   

ಯಾದಗಿರಿ: ನಗರದ ಸ್ಲಂ ಪ್ರದೇಶಗಳನ್ನು ಅಧಿಕೃತವಾಗಿ ಘೋಷಿಸಬೇಕು ಹಾಗೂ ನಿವೇಶನ ರಹಿತರಿಗೆ ತಕ್ಷಣ ನಿವೇಶನ ಕಲ್ಪಿಸಬೇಕು ಎಂದು ಆಗ್ರಹಿಸಿ ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿದರು.

ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕಿ ರೇಣುಕಾ ಸರಡಗಿ ಮಾತನಾಡಿ, ‘ಕಳೆದ 2017 ರಿಂದಲೇ ನಿವೇಶನ ರಹಿತರ ಸಮಸ್ಯೆಯನ್ನು ಜಿಲ್ಲಾಡಳಿತದ ಗಮನಕ್ಕೆ ತರುತ್ತಿದ್ದೇವೆ. ಆದರೂ ನಮ್ಮ ಸಮಸ್ಯೆಗೆ ಸೂಕ್ತ ಸ್ಪಂದನೆ ಸಿಕ್ಕಿಲ್ಲ’ ಎಂದು ಅಸಮಾಧಾನವ್ಯಕ್ತ ಪಡಿಸಿದರು.

‘ಈ ಹಿಂದೆ ಕಳೆದ 2020 ರ ಜನವರಿ 29 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಆರು ದಿನಗಳ ನಿರಂತರ ಧರಣಿ ನಡೆಸಿದ ಸಂದರ್ಭದಲ್ಲಿ ಮುಂಡರಗಿಯಲ್ಲಿರುವ ಸರ್ಕಾರಿ ಜಾಗದಲ್ಲಿ ನಿವೇಶನ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಇಂದಿಗೂ ಸಾಕಾರಗೊಂಡಿಲ್ಲ’ ಎಂದರು.

ADVERTISEMENT

‘ಪ್ರತಿ ಬಾರಿ ಪ್ರತಿಭಟನೆ ಹಮ್ಮಿಕೊಂಡಾಗಲೂ ಜಿಲ್ಲಾಧಿಕಾರಿಗಳು ಲಿಖಿತ ಭರವಸೆ ನೀಡಿದ್ದಾರೆ. ಆದರೂ ಸೂಕ್ತ ಸಮಸ್ಯೆ ಪರಿಹಾರವಾಗಿಲ್ಲ. ಜಿಲ್ಲಾಧಿಕಾರಿಗಳು ಸ್ವತಃ ನೇತೃತ್ವ ವಹಿಸಿ ಯಾದಗಿರಿ ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಕಲ್ಪಿಸಬೇಕು ಹಾಗೂ ನೆನೆಗುದಿಗೆ ಬಿದ್ದಿರುವ ಸ್ಲಂ ಘೋಷಣೆಯನ್ನು ತಕ್ಷಣ ಮಾಡಿಕೊಡಬೇಕು. ಒಂದು ವೇಳೆ 15 ದಿನಗಳೊಳಗೆ ಸಮಸ್ಯೆ ಬಗೆಹರಿಸದಿದ್ದರೆ ನಿರಂತರ ಧರಣಿ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಹಣಮಂತ ಶಾಹಾಪೂರಕರ್, ಖಜಾಂಚಿ ಆನಂದ ಚಟ್ಟರಕರ್, ಸಂಗೀತಾ ಅರಿಕೇರಿ, ನಿರ್ಮಲಾ ಸುಂಗಲಕರ್, ಬಾಬುಮಿಯಾ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.