ADVERTISEMENT

ಯಾದಗಿರಿ: ಶಾಂತಿ ಕದಡುವ ಆರೋಪದ ಮೇಲೆ ಎಸ್‌ಡಿಪಿಐ ಕಾರ್ಯಕರ್ತರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2022, 6:07 IST
Last Updated 27 ಸೆಪ್ಟೆಂಬರ್ 2022, 6:07 IST
ಬಂದೇನವಾಜ ಗೋಗಿ
ಬಂದೇನವಾಜ ಗೋಗಿ   

ಯಾದಗಿರಿ: ಸಮಾಜದಲ್ಲಿ ಶಾಂತಿ ಕದಡುವ ಆರೋಪದ ಮೇಲೆಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ಬಂದೇನವಾಜ ಗೋಗಿ, ಕಾರ್ಯಕರ್ತಮಹಮ್ಮದ್ ಹಸೀಮ್ ಪಟೇಲ್ ಗೋಗಿ ಎನ್ನುವವರನ್ನು ವಶಕ್ಕೆ ಪಡೆಯಲಾಗಿದೆ.

ಶಹಾಪುರ ತಾಲ್ಲೂಕಿನ ಗೋಗಿ ಪೊಲೀಸರು ಎಸ್ ಡಿಪಿ ಐ ಕಾರ್ಯಕರ್ತರನ್ನು ಮಂಗಳವಾರ ಬೆಳಗಿನ ಜಾವ 4 ಗಂಟೆಗೆ ಅವರ ಮನೆಗಳಿಂದ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

'ಎಲ್ಲ ಕಡೆ ಪಿ ಎಫ್ ಐ ಸಂಘಟನೆಯ ಕಾರ್ಯಕರ್ತರ ಮೇಲೆ ದಾಳಿ ನಡೆಯುತ್ತಿರುವ ಕಾರಣ ಗೋಗಿ ಪೊಲೀಸ್ ಠಾಣೆ ವ್ಯಾಪ್ತಿಯ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.ಇವರು ಯಾವುದೇ ಸಂದರ್ಭದಲ್ಲಿ ಜನರನ್ನು ಸೇರಿಸಿಸಮಾಜದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕದಡುವ ಅವಕಾಶ ಇರುವ ಕಾರಣ ವಶಕ್ಕೆ ಪಡೆದುವಿಚಾರಣೆ ನಡೆಸಲಾಗುತ್ತಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

ADVERTISEMENT

ಪಿಎಫ್ ಐ ಮಾಜಿ ಜಿಲ್ಲಾಧ್ಯಕ್ಷ
ಮೊಹಮ್ಮದ್ ಮುನೀರ್ ಬಾಗ್ವಾನ್, ಮಹಮ್ಮದ್ ಮೆಹಬೂಬ್ ಎಂಬುವವರನ್ನುವಶಕ್ಕೆ ಪಡೆದು ಕಲಂ 107,151 ಸಿಅರ್ಪಿಎಸ್ ಪ್ರಕಾರ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಪೊಲೀಸರು ವಶಕ್ಕೆ ಪಡೆದಿರುವವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.