ADVERTISEMENT

ಯಾದಗಿರಿ: ಸೆಪ್ಟೆಂಬರ್ 1ರಂದು ವಿಶೇಷ ಲಸಿಕಾ ಉತ್ಸವ

30 ಸಾವಿರ ಮಂದಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಿಸಿ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2021, 5:33 IST
Last Updated 1 ಸೆಪ್ಟೆಂಬರ್ 2021, 5:33 IST
ಡಾ.ರಾಗಪ್ರಿಯಾ ಆರ್‌.
ಡಾ.ರಾಗಪ್ರಿಯಾ ಆರ್‌.   

ಯಾದಗಿರಿ: ಜಿಲ್ಲೆಯಲ್ಲಿ ಸೆ.1ರಂದು (ಬುಧವಾರ) ವಿಶೇಷ ಲಸಿಕಾ ಉತ್ಸವ ಏರ್ಪಡಿಸಲಾಗಿದ್ದು, 30 ಸಾವಿರ ಮಂದಿಗೆ ಲಸಿಕೆ ಹಾಕುವ ಗುರಿ ಇರಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ತಿಳಿಸಿದರು.

ಮಂಗಳವಾರ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ನಗರ ಹಾಗೂ ಗ್ರಾಮಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಲಸಿಕಾ ಕಾರ್ಯಕ್ರಮ ನಡೆಸಲಾಗುವುದು. ಸಾರ್ವಜನಿಕರು ಆಸಕ್ತಿಯಿಂದ ಬಂದು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಶಿಕ್ಷಣ ಇಲಾಖೆಯ ಎಲ್ಲ ಶಿಕ್ಷಕರು ಲಸಿಕೆ ಅಭಿಯಾನದಲ್ಲಿ ತೊಡಗಿಸಿಕೊಳ್ಳಬೇಕು. ಪ್ರತಿಯೊಬ್ಬ ಶಿಕ್ಷಕರು ಕನಿಷ್ಠ 10 ಮಂದಿಯನ್ನು ಲಸಿಕೆ ಹಾಕಲು ಕರೆತರಬೇಕು. ಪಿಡಿಒ, ಗ್ರಾಮಲೆಕ್ಕಾಧಿಕಾರಿ, ಅಂಗನವಾಡಿ ಕಾರ್ಯಕರ್ತೆಯರು ಸಹ ಕರೆತರಬೇಕು. ಎಸ್‍ಸಿ ಹಾಗೂ ಎಸ್‍ಟಿ ಕಾಲೊನಿಗಳಲ್ಲೂ ಲಸಿಕಾ ಕೇಂದ್ರ ತೆರೆಯಲಾಗುವುದು ಎಂದರು.

ADVERTISEMENT

ಲಸಿಕಾ ಕಾರ್ಯಕ್ರಮಕ್ಕೆ ನಿರ್ಲಕ್ಷ್ಯ ತೋರುವ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಲಸಿಕಾಕರಣ ನಡೆಯಬೇಕು. ಇದಕ್ಕಾಗಿ ಹೆಚ್ಚಿನಸಿಬ್ಬಂದಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ,ಉಪವಿಭಾಗಾಧಿಕಾರಿಪ್ರಶಾಂತ್ ಹನಗಂಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.