ADVERTISEMENT

ಯಾದಗಿರಿ: ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ

ಸಾರ್ವಜನಿಕರ ಕಷ್ಟಗಳಿಗೆ ಪ್ರಮಾಣಿಕವಾಗಿ ಸ್ಪಂದಿಸದ ಅಧಿಕಾರಿಗಳಿಗೆ ರಾಗ‍ಪ್ರಿಯಾ ಕಿವಿಮಾತು

​ಪ್ರಜಾವಾಣಿ ವಾರ್ತೆ
Published 27 ಜನವರಿ 2021, 1:32 IST
Last Updated 27 ಜನವರಿ 2021, 1:32 IST
ಯಾದಗಿರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ 72ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್ ಧ್ವಜಾರೋಹಣ ನೆರವೇರಿಸಿದರು
ಯಾದಗಿರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ 72ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್ ಧ್ವಜಾರೋಹಣ ನೆರವೇರಿಸಿದರು   

ಯಾದಗಿರಿ: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ 72ನೇಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಅವರು ಮಂಗಳವಾರ ಧ್ವಜಾರೋಹಣ ನೆರವೇರಿಸಿದರು.

ನಂತರ ಮಾತನಾಡಿದ ಅವರು,‘ಜ.26, 1950ರಂದು ಭಾರತ ದೇಶ ಗಣರಾಜ್ಯವಾಯಿತು. ಅದರ ಸವಿನೆನಪಿಗಾಗಿ ನಾವು ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿತ್ತ ಬಂದಿದ್ದೇವೆ’ ಎಂದರು.

‘ಸಾರ್ವಜನಿಕರ ಕಷ್ಟಗಳಿಗೆ ನಾವು (ಅಧಿಕಾರಿಗಳು) ಪ್ರಾಮಾಣಿಕವಾಗಿ ಸ್ಪಂದಿಸದರೆ ಮಾತ್ರ ನಮ್ಮ ಮೇಲೆ ಜನರಿಗೂ ಗೌರವ ಬರುತ್ತದೆ’ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ADVERTISEMENT

ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ಭಾರತ ದೇಶದ ಲಿಖಿತ ಸಂವಿಧಾನವನ್ನು ರಚಿಸಿ 1949ರ ನ.26ರಂದು ಅಂಗೀಕರಿಸಲಾಗಿದೆ ಎಂದು ತಿಳಿಸಿದರು.

ಇದೇವೇಳೆಕಳೆದ ತಿಂಗಳು ಜರುಗಿದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಕಂದಾಯ ಇಲಾಖೆ, ಚುನಾವಣಾ ಆಯೋಗ ಸೇರಿದಂತೆ ಇತರ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.

ಈ ವೇಳೆ ಜಿಲ್ಲಾ ಪಂಚಾಯಿತಿಸಿಇಒ ಶಿಲ್ಪಾ ಶರ್ಮಾ,ಹೆಚ್ಚುವರಿಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ, ಉಪವಿಭಾಗಾಧಿಕಾರಿಶಂಕರಗೌಡ ಸೋಮನಾಳ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.