ADVERTISEMENT

ಯಾದಗಿರಿ | ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛತೆ

ಅರಕೇರಾ (ಕೆ) ಗ್ರಾಮದ ವಸತಿ ಶಾಲೆಯಲ್ಲಿನ ವಿಡಿಯೊ ಹರಿದಾಟ

​ಪ್ರಜಾವಾಣಿ ವಾರ್ತೆ
Published 18 ಜುಲೈ 2025, 0:30 IST
Last Updated 18 ಜುಲೈ 2025, 0:30 IST
<div class="paragraphs"><p>ಶೌಚಾಲಯ ಸ್ವಚ್ಛಗೊಳಿಸಿದ ವಿದ್ಯಾರ್ಥಿನಿ</p></div>

ಶೌಚಾಲಯ ಸ್ವಚ್ಛಗೊಳಿಸಿದ ವಿದ್ಯಾರ್ಥಿನಿ

   

ಯಾದಗಿರಿ: ತಾಲ್ಲೂಕಿನ ಅರಕೇರಾ (ಕೆ) ಗ್ರಾಮದ ಕಸ್ತೂರಬಾ ಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛ ಮಾಡಿಸಿದ್ದಾರೆ ಎನ್ನಲಾದ ವಿಡಿಯೊ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಸತಿ ಶಾಲೆಯಲ್ಲಿ 8ರಿಂದ 10ನೇ ತರಗತಿಯವರೆಗೆ ಒಟ್ಟು 97 ವಿದ್ಯಾರ್ಥಿನಿಯರು ಓದುತ್ತಿದ್ದಾರೆ. ವಾರಕ್ಕೊಮ್ಮೆ ವಸತಿ ಶಾಲೆಯಲ್ಲಿ ಪಾಳಿ ಪ್ರಕಾರ ವಿದ್ಯಾರ್ಥಿನಿಯರೇ ಶೌಚಾಲಯ ಸ್ವಚ್ಛಗೊಳಿಸುವುದಾಗಿ ಕೆಲ ವಿದ್ಯಾರ್ಥಿನಿಯರು ಹೇಳಿರುವುದು ವಿಡಿಯೊದಲ್ಲಿದೆ. 

ADVERTISEMENT

ವಸತಿ ಶಾಲೆಯಲ್ಲಿ ಮುಖ್ಯಶಿಕ್ಷಕಿಯಾಗಿ ನಿವೇದಿತಾ ಹಾಗೂ ವಾರ್ಡನ್ ಆಗಿ ರೇಣುಕಾ ಎಂಬುವವರು ಕಾರ್ಯನಿರ್ವಹಿಸುತ್ತಿದ್ದಾರೆ. 

‘ಶೌಚಾಲಯ ಸ್ವಚ್ಛತೆಗೆ ಯಾರೂ ಸಿಗದ ಕಾರಣ ಒಂದು ಸಲ ವಿದ್ಯಾರ್ಥಿನಿಯರೇ ಸ್ವಚ್ಛ ಮಾಡಿಕೊಂಡಿರಬಹುದು. ಆದರೆ, ಇದನ್ನು ವಿಡಿಯೊ ಮಾಡಿದವರು ಪುರುಷರಾಗಿದ್ದಾರೆ. ಅವರಿಗೆ ಒಳಗೆ ಬರಲು ಯಾರು ಅನುಮತಿ ಕೊಟ್ಟಿದ್ದಾರೆ’ ಎಂದು ನಿವೇದಿತಾ ಪ್ರಶ್ನಿಸಿದ್ದಾರೆ.

ಈ ಕುರಿತು ಮೇಲಧಿಕಾರಿಗಳಿಗೆ ದೂರು ನೀಡಲಾಗುವುದು ಎಂದು ತಿಳಿಸಿದ್ದಾರೆ. 

ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ವಿಷಯ ಗಮನಕ್ಕೆ ಬಂದಿದ್ದು ಸಮಗ್ರ ವರದಿ ತರಿಸಿಕೊಂಡು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು
ಸಿ.ಎಸ್.ಮುಧೋಳ ಡಿಡಿಪಿಐ ಯಾದಗಿರಿ
ಘಟನೆ ಕುರಿತು ಮುಖ್ಯಶಿಕ್ಷಕಿ ವಿರುದ್ಧ ಸೂಕ್ತ ಕ್ರಮ ಕೈಗೊಂಡು ವಸತಿ ಶಾಲೆಗೆ ಭೇಟಿ ನೀಡಿ ವಿಸ್ತೃತ ವರದಿಯನ್ನು ಆಯೋಗಕ್ಕೆ ಸಲ್ಲಿಸುವಂತೆ ಸೂಚಿಸಿದ್ದೇನೆ
ಶಶಿಧರ ಕೋಸಂಬೆ ಸದಸ್ಯ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.