ಪ್ರಾತಿನಿಧಿಕ ಚಿತ್ರ
ಯಾದಗಿರಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಕಾಯ್ದೆ, ಸಾರ್ವಜನಿಕ ವಲಯದ ಖಾಸಗೀಕರಣ, ಕೃಷಿ ಹಾಗೂ ಕಾರ್ಮಿಕ ಹಕ್ಕುಗಳಿಗೆ ಧಕ್ಕೆ ತರುವ ಮಸೂದೆಗಳ ವಿರುದ್ಧ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಯಿದ್ದು, ಸ್ವಯಂಪ್ರೇರಿತ ಬಂದ್ ಮೂಲಕ ಸಹಕರಿಸಲು ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ಸಂಚಾಲಕಿ ಎಸ್ .ವರಲಕ್ಷ್ಮೀ ಮನವಿ ಮಾಡಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೊದಲಿದ್ದ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ, ಹೊಸದಾಗಿ ರೂಪಿಸಿದ ನಾಲ್ಕು ಕಾಯ್ದೆಗಳು ಕನಿಷ್ಠ ವೇತನ, ಸಾಮಾಜಿಕ ಭದ್ರತೆ, ಸಂಘಟನೆ ಮತ್ತು ಮುಷ್ಕರದ ಹಕ್ಕುಗಳನ್ನು ಕುಂಠಿತಗೊಳಿಸುತ್ತಿವೆ’ ಎಂದು ಆರೋಪಿಸಿದರು.
‘ಎನ್.ಎಂ.ಪಿ ಮತ್ತು ಪಿಪಿಪಿ ಮಾದರಿ ಮೂಲಕ ವಿದ್ಯುತ್, ರೈಲ್ವೆ, ಬಂದರು, ಗಣಿಗಾರಿಕೆ ಸೇರಿದಂತೆ ಸಾರ್ವಜನಿಕ ವಲಯದ ಖಾಸಗೀಕರಣ ವೇಗಗೊಂಡ ಹಿನ್ನೆಲೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಸೇರಿ ಕಾರ್ಮಿಕ ಸಂಘಟನೆಗಳು ಮುಷ್ಕರವಕ್ಕೆ ಕರೆ ನೀಡಿವೆ’ ಎಂದು ತಿಳಿಸಿದರು.
‘ಕೃಷಿ ವಲಯದಲ್ಲಿ ಭೂಸ್ವಾಧೀನ ತಿದ್ದುಪಡಿ, ಬೀಜ ಮಸೂದೆ ಹಾಗೂ ವಿದ್ಯುತ್ (ತಿದ್ದುಪಡಿ) ಮಸೂದೆಗಳಿಂದ ರೈತರು ಮತ್ತು ಎಂಎಸ್ಎಂಇ ಗ್ರಾಹಕರ ಮೇಲೆ ಪರಿಣಾಮ ಬೀರುತ್ತದೆ. ನಗೇರಾ ಬದಲಾವಣೆಗಳು ಹಕ್ಕು ಆಧಾರಿತ ಉದ್ಯೋಗ ಭದ್ರತೆಯನ್ನು ದುರ್ಬಲಗೊಳಿಸುತ್ತಿವೆ’ ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.