ADVERTISEMENT

ಆರೋಗ್ಯ ಸೇವೆ ಹಿದೃಷ್ಟಿಯಿಂದ ಮುಷ್ಕರ ಕೈಬಿಡಲು ಸೂಚನೆ

​ಪ್ರಜಾವಾಣಿ ವಾರ್ತೆ
Published 28 ಜನವರಿ 2026, 6:34 IST
Last Updated 28 ಜನವರಿ 2026, 6:34 IST
<div class="paragraphs"><p>&nbsp;ಪ್ರಾತಿನಿಧಿಕ ಚಿತ್ರ</p></div>

 ಪ್ರಾತಿನಿಧಿಕ ಚಿತ್ರ

   

ಯಾದಗಿರಿ: ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ (ಎನ್ಎಚ್ಎಂ) ಗುತ್ತಿಗೆ ನೌಕರರ ಸಂಘದ ವತಿಯಿಂದ ಗುರುವಾರ (ಜ.29) ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರೆ ನೀಡಿರುವ ಮುಷ್ಕರವನ್ನು ಆರೋಗ್ಯ ಸೇವೆಯ ವ್ಯಥ್ಯಯ ಹಿನ್ನೆಲೆಯಲ್ಲಿ ಕೈಬಿಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಶ ಬಿರಾದರ್ ಅವರು ಸೂಚನೆ ನೀಡಿದ್ದಾರೆ.

ಜಿಲ್ಲೆಯ ಗುತ್ತಿಗೆ ಅಧಾರದಲ್ಲಿ ಸೇವಚೆಯಲ್ಲಿರುವ ಸಮುದಾಯ ಆರೋಗ್ಯ ಅಧಿಕಾರಿಗಳು ಮನವಿ ಪತ್ರದ ಮೂಲಕ ವೇತನ ಪ್ರೋತ್ಸಾಹಧನ ಹಾಗೂ ವಿವಿಧ ಭತ್ಯೆಗಳ ಪಾವತಿಯಲ್ಲಿ ಆಗುತ್ತಿರುವ ವಿಳಂಬದ ಕುರಿತು ಮನವಿ ಮಾಡಿದ್ದು, ಜನವರಿ 23 ರಂದು ಅನುದಾನ ಬಿಡುಗಡೆಯಾಗಿದೆ. ಲಭ್ಯವಿರುವ ಅನುದಾನದಲ್ಲಿ ನವೆಂಬರ್ ಹಾಗೂ ಡಿಸೆಂಬರ್ ತಿಂಗಳ ವೇತನ ಪಾವತಿ ಮಾಡಲಾಗುತ್ತಿದೆ. ಸಾಧ್ಯವಾಗುವ ಎಲ್ಲಾ ಬೇಡಿಕೆಗಳನ್ನೂ ಈಡೇರಿಸಲಾಗುತ್ತದೆ. ಆದ್ದರಿಂದ ಸಾರ್ವಜನಿಕರ ಆರೋಗ್ಯ ಸೇವೆಯ ಹಿತದೃಷ್ಟಿಯಿಂದ ಮುಷ್ಕರ ಕೈಬಿಡಲು ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.