
ಪ್ರಜಾವಾಣಿ ವಾರ್ತೆ
ಮಗು (ಪ್ರಾತಿನಿಧಿಕ ಚಿತ್ರ)
ಯಾದಗಿರಿ: ‘ಯಿಮ್ಸ್’ನ ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಶಿಶು ಸಾವು ಪ್ರಕರಣ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ದೂರು ದಾಖಲಿಸಿಕೊಂಡಿದೆ.
‘ಹೆರಿಗೆ ವೇಳೆ ಶಿಶು ಸಾವು: ವೈದ್ಯರ ವಿರುದ್ಧ ಪ್ರತಿಭಟನೆ’ ಶೀರ್ಷಿಕೆ ಅಡಿ ‘ಪ್ರಜಾವಾಣಿ’ಯ ಡಿಸೆಂಬರ್ 8ರ ಸಂಚಿಕೆಯಲ್ಲಿ ಸುದ್ದಿ ಪ್ರಕಟವಾಗಿತ್ತು. ಇದನ್ನು ಗಮನಿಸಿದ ಆಯೋಗವು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಘಟನೆ ಕುರಿತ ಸಮಗ್ರ ವರದಿಯನ್ನು 7 ದಿನದಲ್ಲಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಆಯೋಗದ ರಾಜ್ಯ ಅಧ್ಯಕ್ಷ ಶಶಿಧರ್ ಎಸ್.ಕೋಸಂಬೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.