
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಯಾದಗಿರಿ: ಮದ್ಯಪಾನದ ನಶೆಯಲ್ಲಿ ಕ್ರಿಮಿನಾಶಕ ಕುಡಿದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಗೆ ಸ್ಪಂದಿಸದೆ ತಾಲ್ಲೂಕಿನ ಕೊಂಡಾಪುರದ ನಿವಾಸಿಯೊಬ್ಬರು ಮೃತಪಟ್ಟಿದ್ದಾರೆ.
ಮದ್ಯವ್ಯಸನಿಯಾಗಿದ್ದ ಮುಕ್ತುಂ ಪಟೇಲ್ (43) ಸಾವನ್ನಪ್ಪಿದವರು. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಕ್ತುಂ ಅವರು ಎಂದಿನಂತೆ ಮದ್ಯಪಾನ ಮಾಡಿ ಮನೆಗೆ ಬಂದಿದ್ದರು. ಊಟ ಮಾಡಲು ನಿರಾಕರಿಸಿದ್ದು, ಬಾಯಿಯಿಂದ ನೊರೆ ಬಂದು ಕ್ರಿಮಿನಾಶಕ ವಾಸನೆಯೂ ಬಂತು. ತಕ್ಷಣವೇ ಸೈದಾಪುರದ ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪೊಲೀಸರು ತಿಳಿಸಿದರು.
ಚಿಕಿತ್ಸೆಗೆ ಸ್ಪಂದಿಸದೆ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.