ಯಾದಗಿರಿ: ಮಹಿಳೆಯರು, ಸಹಕಾರ ಕ್ಷೇತ್ರದಲ್ಲಿ ತೊಡಗಿಕೊಳ್ಳುವುದರ ಮೂಲಕ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ರೇಖಾ ಗಾಯಕ್ವಾಡ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ಬೆಂಗಳೂರು ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ ಯಾದಗಿರಿ ಹಾಗೂ ಸಹಕಾರ ಇಲಾಖೆ ಯಾದಗಿರಿ ಆಶ್ರಯದಲ್ಲಿ ತಾಲ್ಲೂಕು ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಸದಸ್ಯರಿಗೆ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಮಹಿಳಾ ಸದಸ್ಯರಿಗೆ ಕ್ಲಸ್ಟರ್ ತರಬೇತಿಯಲ್ಲಿ ಅವರು ಮಾತನಾಡಿದರು.
‘ಸಹಕಾರ ಕ್ಷೇತ್ರದಿಂದ ಮಹಿಳೆಯರಿಗೆ ಸಿಕ್ಕಂತಹ ಸೌಲಭ್ಯಗಳು ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಕಾರ್ಯ ಚಟುವಟಿಕೆಗಳ ಮಾಹಿತಿ ಪಡೆಯಬೇಕು’ ಎಂದರು.
ಜಿಲ್ಲಾ ಸಹಕಾರ ಒಕ್ಕೂಟದ ಕಾರ್ಯ ಚಟುವಟಿಕೆಗಳ ಬಗ್ಗೆ ಹಾಗೂ ಕೆಐಸಿಎಂ ಕಾರ್ಯ ಚಟುವಟಿಕೆಗಳ ಬಗ್ಗೆ ಮತ್ತು ಡಿಪ್ಲೊಮಾ ಇನ್ ಕೋಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಯ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾ ಸಹಕಾರ ಒಕ್ಕೂಟದಲ್ಲಿ ಸದಸ್ಯತ್ವ ಪಡೆಯುವ ಕುರಿತು ಉಪನ್ಯಾಸ ನೀಡಿದರು.
ಸಹಕಾರ ಸಂಘದ ಅಧ್ಯಕ್ಷ ಶಶಿಕಲಾ ಸುರೇಂದ್ರ ಹಾಗೂ ಸಂಘದ ಕಾರ್ಯದರ್ಶಿ ಅಣ್ಣಯ್ಯ ತಿಪ್ಪಣ್ಣ ಹಾಗೂ ಸಹಕಾರ ಸಂಘದ ಮಹಿಳಾ ಸದಸ್ಯರು ಉಪಸ್ಥಿತರಿದ್ದರು. ಜಿಲ್ಲಾ ಸಹಕಾರ ಶಿಕ್ಷಕ ಸುಜಾತ ಮಠ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.