ADVERTISEMENT

ಯಾದಗಿರಿ: ನಿರ್ಲಕ್ಷ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ಜನವರಿ 2026, 6:34 IST
Last Updated 28 ಜನವರಿ 2026, 6:34 IST
   

ಯಾದಗಿರಿ: ‘ಜಿಲ್ಲೆಯಲ್ಲಿ ನಿರುದ್ಯೋಗ, ಬಡತನದ ಸಮಸ್ಯೆಗಳ ಕಾರಣ ಶೈಕ್ಷಣಿಕ, ಆರ್ಥಿಕ ಹಾಗೂ ಔದ್ಯೋಗಿಕವಾಗಿ ಹಿಂದುಳಿದ ಪ್ರದೇಶ ಎನ್ನುವ ಹಣೆಪಟ್ಟಿಯಿದೆ. ಜಿಲ್ಲೆಯಲ್ಲಿ ಉದ್ಯೋಗಮೇಳ ಆಯೋಜಿಸುವ ನಿರುದ್ಯೋಗ ಸಮಸ್ಯೆಯನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ನಿರ್ಲಕ್ಷ ವಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮವಹಿಸಬೇಕು’ ಎಂದು ಮಾದಿಗ ದಂಡೋರ(ಪಾವಗಡ ಶ್ರೀರಾಮ್) ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ದಾಸನಕೇರಿ ಆಗ್ರಹಿಸಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನವಿ ಪತ್ರ ನೀಡಿದ ಅವರು, ‘ಜಿಲ್ಲೆಯ ಮತ್ತು ನೆರೆ ಜಿಲ್ಲೆಗಳ ವ್ಯಾಪ್ತಿಯಲ್ಲಿ ಉದ್ಯೋಗ ದೊರಕಿಸಿಕೊಡುವ ಜವಬ್ದಾರಿ ಜಿಲ್ಲಾ ಉದ್ಯೋಗಾಧಿಕಾರಿಗಳಿಗೆ ಇದೆ. ಆದರೆ, ಕಳೆದ 6 ತಿಂಗಳಿಂದ ಅಂತಹ ಯಾವ ಪ್ರಯತ್ನಗಳೂ ಜರುಗಿಲ್ಲ. ಇಲಾಖೆಯ ಹೆಚ್ಚುವರಿ ಜವಾಬ್ದಾರಿಯಿರುವ ಜಿಲ್ಲಾ ಮಟ್ಟದ ಅಧಿಕಾರಿ ಕಚೇರಿಗೆ ಬರುವುದಿಲ್ಲ’ ಎಂದು ಆರೋಪಿಸಿದ್ದಾರೆ.

‘ಜಿಲ್ಲೆಯಲ್ಲಿ ಯುವನಿಧಿ ಸೌಲಭ್ಯ ಪಡೆಯುವಲ್ಲಿ ಸಮಸ್ಯೆಯಾಗುತ್ತಿದೆ. ಹಾಗೂ ಯುವನಿಧಿ ಪಡೆಯುವವರಿಗೆ ಕೌಶಲ್ಯ ತರಬೇತಿ ನೀಡುವ ನಿರ್ದೆಶನವಿದ್ದರೂ ಪಾಲನೆಯಾಗುತ್ತಿಲ್ಲ. ಆದ್ದರಿಂದ ಕೋಡಲೇ ನಿರ್ಲಕ್ಷ ಧೋರಣೆಯ ಅಧಿಕಾರಿಗಳ ವಿರುದ್ಧ ಕ್ರಮವಹಿಸಿ’ ಎಂದು ಪತ್ರದಲ್ಲಿ ಕೋರಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.