ಯಾದಗಿರಿ: ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ವರ್ಗೀಕರಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಮಾಡಿರುವ ತಪ್ಪನ್ನು ಮುಂದಿನ ಸಚಿವ ಸಚಿವ ಸಂಪುಟದಲ್ಲಿ ಸರಿಪಡಿಸಿಕೊಳ್ಳಬೇಕು ಎಂದು ರಾಜ್ಯ ಮಾದಿಗ ಸಮಾಜದ ಮುಖಂಡ ದೇವಿಂದ್ರನಾಥ ನಾದ ಹಾಗೂ ನಗರಸಭೆ ಸದಸ್ಯ ಹಣಮಂತ ಇಟಗಿ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರವು ಎಡಗೈ ಹಾಗೂ ಬಲಗೈ ಸಮುದಾಯಗಳಿಗೆ ತಲಾ ಶೇ 6ರಷ್ಟು ಮೀಸಲಾತಿ, ಭೋವಿ, ಲಂಬಾಣಿ ಸೇರಿದಂತೆ ಸ್ಪೃಶ್ಯ ಗುಂಪಿಗೆ ಶೇ 5ರಷ್ಟು ಮೀಸಲಾತಿ ವರ್ಗೀಕರಣ ಮಾಡಿದೆ. ಈ ಸೂತ್ರವು ಸುಪ್ರೀಂಕೋರ್ಟ್ ತೀರ್ಪಿನ ನಿರ್ದೇಶನಗಳಿಗೆ ಅನ್ವಯ ಆಗುವುದಿಲ್ಲ ಎಂದು ಜಂಟಿ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒತ್ತಡಕ್ಕೊಳಗಾಗಿ ಸುಪ್ರೀಂಕೋರ್ಟ್ ಆಶಯವನ್ನು ಗಾಳಿಗೆ ತೂರಿ ಅನ್ಯಾಯ ಮಾಡಿದ್ದಾರೆ. ಸೆಪ್ಟೆಂಬರ್ 4ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಹಿಂದಿನ ತಪ್ಪನ್ನು ಸರಿಪಡಿಸಿಕೊಳ್ಳಬೇಕು. ನಿಖರ ದತ್ತಾಂಶಗಳ ಆಧಾರದಲ್ಲಿ ವರ್ಗೀಕರಣ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.