ಗುರುಮಠಕಲ್: ತಾಲ್ಲೂಕಿನ ವಿವಿಧೆಡೆ ಮಂಗಳವಾರ ಪೊಲೀಸ್ ಸಿಬ್ಬಂದಿ ದಾಳಿ ಮಾಡಿ ಮೂವರು ಮಟ್ಕಾ ಬುಕಿಗಳನ್ನು ಬಂಧಿಸಿದ್ದು, ಅವರಿಂದ ₹8,200 ನಗದು ಸೇರಿದಂತೆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಪಟ್ಟಣದ ಮೋಮಿನಪುರ ಬಡಾವಣೆಯ ಮಹಮ್ಮದ್ ಯುನೂಸ್ (33), ನಾನಾಪುರ ಬಡಾವಣೆಯ ಅಂಬಾದಾಸ ತಗಡಗರ (41) ಹಾಗೂ ಚಪೆಟ್ಲಾ ಗ್ರಾಮದ ಸಾಯಪ್ಪ ಅದಗಲ್ (34) ಬಂಧಿತ ಆರೋಪಿಗಳು.
ಬಂಧಿತರಿಂದ ₹8,200 ನಗದು ಹಾಗೂ ಮಟ್ಕಾ ಬರೆದುಕೊಳ್ಳಲು ಬಳಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸ್ ಸಿಬ್ಬಂದಿ ಮಾಹಿತಿ ನೀಡಿದರು.
ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.