
ಪ್ರಜಾವಾಣಿ ವಾರ್ತೆ
ಯಾದಗಿರಿ: ರಾಜ್ಯದ ವಿವಿಧ ಜಿಲ್ಲೆಗಳ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದ ಕಾರಣ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸಿಬ್ಬಂದಿ ನಗರದ ಜನಸಂದಣಿ ಸ್ಥಳಗಳಲ್ಲಿ ಸೋಮವಾರ ಪರಿಶೀಲನೆ ನಡೆಸಿದರು.
ನಗರದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಜಿಲ್ಲಾ ನ್ಯಾಯಾಲಯದ ಸೇರಿದಂತೆ ವಿವಿಧೆಡೆ ತಪಾಸಣೆ ನಡೆಸಿದರು. ಶ್ವಾನ ದಳದೊಂದಿಗೆ ಪ್ರಯಾಣಿಕರ ಲಗೇಜ್, ಅನುಮಾನಾಸ್ಪದ ವಸ್ತುಗಳನ್ನು ಪರಿಶೀಲಿಸಿದರು.
ಬಾಂಬ್ ನಿಷ್ಕ್ರಿಯ ದಳದ ತಂಡವು ಮಂಗಳವಾರ ನಾರಾಯಣಪುರ ಜಲಾಶಯ ಸೇರಿದಂತೆ ಜಿಲ್ಲೆಯ ಇತರೆ ಪ್ರಮುಖ ಸ್ಥಳಗಳಿಗೆ ತೆರಳಿ ತಪಾಸಣೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.