ADVERTISEMENT

ಯಾದಗಿರಿ | ಪ್ರತ್ಯೇಕ ಪ್ರಕರಣ: ಮೂವರ ವಿರುದ್ಧ ಪೋಕ್ಸೊ ಪ್ರಕರಣ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2025, 0:01 IST
Last Updated 18 ಅಕ್ಟೋಬರ್ 2025, 0:01 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಯಾದಗಿರಿ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರ ವಿರುದ್ಧ ಪೋಕ್ಸೊ ಕಾಯ್ದೆಯನ್ವಯ ಪ್ರಕರಣ ದಾಖಲಾಗಿವೆ.

ಯಾದಗಿರಿ ಮಹಿಳಾ ಠಾಣೆ ವ್ಯಾಪ್ತಿಯಲ್ಲಿ 17 ವರ್ಷದ ಬಾಲಕಿಗೆ  ಮದುವೆ ಆಗುವುದಾಗಿ ಪುಸಲಾಯಿಸಿ ಶಿವರಾಜ ತಿಮ್ಮಣ್ಣಗೌಡ (22) ಲೈಂಗಿಕ ದೌರ್ಜನ್ಯ ಎಸಗಿದ್ದ. 

ADVERTISEMENT

ಸೈದಾಪುರ ಠಾಣೆ ವ್ಯಾಪ್ತಿಯಲ್ಲಿ ಪ್ರೀತಿಸುವ ನೆಪದಲ್ಲಿ 16 ವರ್ಷದ ಬಾಲಕಿಯನ್ನು ಅಶೋಕ ಬಾವೂರ (22) ತಡರಾತ್ರಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

2021ರಲ್ಲಿ ಸೈದಾಪುರ ಠಾಣೆ ವ್ಯಾಪ್ತಿಯಲ್ಲಿ ಪರಿಚಯಸ್ಥ ಕೆ.ಗುರುಮಹೇಂದ್ರ ಅವರು ಕೊಟ್ಟಿದ್ದ ಪಾನೀಯ ಕುಡಿದು ಬಾಲಕಿ ತಲೆ ಸುತ್ತು ಬಿದ್ದಿದ್ದು, ನಂತರ ಲೈಂಗಿಕ ದೌರ್ಜನ್ಯ ಎಸಗಿದ್ದ. ಹಲವು ಬಾರಿ ಕೃತ್ಯ ಜೀವ ಬೆದರಿಕೆ ಹಾಕಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.