ADVERTISEMENT

ಯಾದಗಿರಿ: ವಿವಿಧೆಡೆ ಯೋಗ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2020, 4:42 IST
Last Updated 21 ಜೂನ್ 2020, 4:42 IST
ಯಾದಗಿರಿಯ ಸರ್ಕಾರಿ ಪದವಿ ಮಹಾವಿದ್ಯಾಲಯ ಪ್ರಾಂಶುಪಾಲ ಡಾ.ಸುಭಾಶ್ಚಂದ್ರ ಕೌಲಗಿ ಮನೆಯಲ್ಲಿ ಯೋಗ ಮಾಡಿದರು
ಯಾದಗಿರಿಯ ಸರ್ಕಾರಿ ಪದವಿ ಮಹಾವಿದ್ಯಾಲಯ ಪ್ರಾಂಶುಪಾಲ ಡಾ.ಸುಭಾಶ್ಚಂದ್ರ ಕೌಲಗಿ ಮನೆಯಲ್ಲಿ ಯೋಗ ಮಾಡಿದರು   
""

ಯಾದಗಿರಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ವಿವಿಧ ಸಂಘ-ಸಂಸ್ಥೆಗಳು ಯೋಗವನ್ನು ಆನ್‌ಲೈನ್ ಮೂಲಕ ಹಮ್ಮಿಕೊಂಡಿದ್ದವು.

ಸರ್ಕಾರಿ ಪದವಿ ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ.ಸುಭಾಶ್ಚಂದ್ರ ಕೌಲಗಿ ಅವರು ಕೊರೊನಾ ಹಿನ್ನೆಲೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಮನೆಯಲ್ಲಿಯೇ ಯೋಗ ಮಾಡುವುದರ ಮೂಲಕ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದರು.

ಎಲ್ಲ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಕೂಡಾ ಮನೆಯಲ್ಲಿಯೇ ಯೋಗ ಮಾಡಿ, ಇಲಾಖೆಯಿಂದ ಯುಟ್ಯೂಬ್ ಮೂಲಕ ನಡೆದ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡರೆಂದು ಅವರು ತಿಳಿಸಿದ್ದಾರೆ.

ADVERTISEMENT
ಯಾದಗಿರಿಯಲ್ಲಿ ಯೋಗ ದಿನಾಚರಣೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.