ADVERTISEMENT

ಯಾದಗಿರಿ| ಕಲಾ ಪ್ರತಿಭೆಗಳಿಗೆ ಯುವಜನೋತ್ಸವ ಸಹಕಾರಿ: ಜಿಲ್ಲಾಧಿಕಾರಿ ಹರ್ಷಲ್ ಬೋಯರ್

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2025, 6:59 IST
Last Updated 17 ಅಕ್ಟೋಬರ್ 2025, 6:59 IST
<div class="paragraphs"><p>ಯಾದಗಿರಿ ನಗರದಲ್ಲಿ ನಡೆದ ಯುವಜನೋತ್ಸವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಉದ್ಘಾಟಿಸಿದರು.</p></div>

ಯಾದಗಿರಿ ನಗರದಲ್ಲಿ ನಡೆದ ಯುವಜನೋತ್ಸವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಉದ್ಘಾಟಿಸಿದರು.

   

ಯಾದಗಿರಿ: ‘ಕಲಾ ಪ್ರತಿಭೆಯನ್ನು ಪ್ರದರ್ಶಿಸಲು ಯುವಜನೋತ್ಸವ ಅತ್ಯಂತ ಸಹಕಾರಿಯಾಗಿದೆ’ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಹೇಳಿದರು.

ನಗರದ ಪದವಿ ಮಹಾವಿದ್ಯಾಲಯದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ADVERTISEMENT

‘ಯುವ ಜನಾಂಗ ಉತ್ಸಾಹದಿಂದ ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಯುವಜನೋತ್ಸವ ಸದಾವಕಾಶದ ಮುಖ್ಯ ವೇದಿಕೆ. ಇದು ಯುವಪೀಳಿಗೆ ಪ್ರೇರಣಾದಾಯಕವಾಗಬೇಕು ಎಂದರು.

ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಯುವಜನೋತ್ಸವ ಹಮ್ಮಿಕೊಳ್ಳುವ ಉದ್ದೇಶ ಹೊಂದಲಾಗಿದೆ ಎಂದರು.

ಪದವಿ ಕಾಲೇಜು ಪ್ರಾಂಶುಪಾಲ ಸುಭಾಸ್‌ಚಂದ್ರ ಕೌಲಗಿ ಮಾತನಾಡಿ, ಅಳ, ವ್ಯಕ್ತಿತ್ವ ವಿಕಸನಕ್ಕೆ ಇಂತಹ ಯುವಜನೋತ್ಸವ ಹೆಚ್ಚು ಸಹಕಾರಿ. ಗುರಿ ಇಲ್ಲದೆ ನಡೆಯುತ್ತಿರುವ ಯುವ ಜನಾಂಗಕ್ಕೆ ಇಂತಹ ಉತ್ಸವಗಳು ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಿವೆ’ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರ್ ಉದ್ಘಾಟಿಸಿದರು. ನಗರಸಭೆ ಉಪಾಧ್ಯಕ್ಷ ರುಕಯ್ಯಾ ಬೇಗಮ್, ಡಿವೈಎಸ್ಪಿ ಸುರೇಶ್, ನಗರಸಭೆ ಸದಸ್ಯೆ ವಿಜಯಲಕ್ಷ್ಮಿ ಉಪಸ್ಥಿತರಿದ್ದರು.

ಯುವಜನಸೇವಾ ಹಾಗೂ ಕ್ರೀಡಾಧಿಕಾರಿ ರಾಜು ಬಾವಿ ಹಳ್ಳಿ ಸ್ವಾಗತಿಸಿದರು. ಗುರುಪ್ರಸಾದ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.