ಹುಣಸಗಿ: ತಾಲ್ಲೂಕಿನ ರಾಜನಕೋಳೂರು ಗ್ರಾಮದಲ್ಲಿ ಯುವಕನೊರ್ವ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಸ್ಟೇಟಸ್ ಹಾಕಿದ್ದರಿಂದ ಗ್ರಾಮದಲ್ಲಿ ಶನಿವಾರ ರಾತ್ರಿ ಬಿಗುವಿನ ವಾತಾವರಣ ಉಂಟಾಗಿತ್ತು.
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಪ್ರವಾಸಿಗರ ಹತ್ಯೆಯ ಸಂದರ್ಭದಲ್ಲಿ ಧರ್ಮವನ್ನು ಕೇಳಿ ಹತ್ಯೆ ಮಾಡಿಲ್ಲ ಎಂಬ ಮೃತ ಭರತ್ ಅವರ ಪತ್ನಿಯ ಹೇಳಿಕೆಯನ್ನು ಪ್ರಚೋದನಾಕಾರಿಯಾಗಿ ಸ್ಟೇಟಸ್ ಹಾಕಿದ್ದ ಎಂದು ತಿಳಿದು ಬಂದಿದೆ. ಈ ವ್ಯಕ್ತಿ ರಾಜನಕೋಳುರು ಗ್ರಾಮದಲ್ಲಿ ಎಗ್ ರೈಸ್ ಅಂಗಡಿ ಇಟ್ಟುಕೊಂಡಿದ್ದ ಎಂದು ತಿಳಿದು ಬಂದಿದೆ. ವಿಷಯ ಗ್ರಾಮದಲ್ಲಿ ಹರಡುತ್ತಿದ್ದಂತೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಭಾನುವಾರ ಕೊಡೇಕಲ್ಲ ಪೊಲೀಸರು 9 ಜನರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿರುವದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆಯ ವಿಷಯ ತಿಳಿಯುತ್ತಿದ್ದಂತೆ ರಾಜನಕೋಳೂರು ಗ್ರಾಮಕ್ಕೆ ಶನಿವಾರ ರಾತ್ರಿಯೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ, ಸುರಪುರ ಡಿವೈಎಸ್ಪಿ ಜಾವೇದ ಇನಾಮದಾರ, ಹುಣಸಗಿ ಸಿಪಿಐ ರವಿಕುಮಾರ ನೈಕೋಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿಯ ವಾತಾವರಣ ಶಾಂತಿಯುತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.