ಮೆಟ್ರೊ
ಬೆಂಗಳೂರು: ನಮ್ಮ ಮೆಟ್ರೊ ಪ್ರಯಾಣ ದರ ಸೋಮವಾರದಿಂದ (ಫೆ.9) ಶೇ 5ರಷ್ಟು ಹೆಚ್ಚಳ ಮಾಡುವ ಪ್ರಸ್ತಾವ ಸದ್ಯಕ್ಕೆ ಸ್ಥಗಿತಗೊಂಡಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ದರ ಏರಿಕೆ ಮಾಡದಂತೆ ಕೇಂದ್ರ ನಗರ ವ್ಯವಹಾರಗಳ ಸಚಿವ ಮನೋಹರ ಲಾಲ್ ಖಟ್ಟರ್ ಅವರು ನೀಡಿದ ಸೂಚನೆ ಭಾನುವಾರ ರಾತ್ರಿ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಜೆ. ರವಿಶಂಕರ್ ಅವರಿಗೆ ತಲುಪಿದೆ. ಆನಂತರ, ಪ್ರಯಾಣ ದರ ಏರಿಕೆಯ ನಿರ್ಧಾರವನ್ನು ಮುಂದೂಡುವುದಾಗಿ ಅಧಿಕಾರಿಗಳು ಪ್ರಕಟಿಸಿದ್ದಾರೆ.
ಫೆಬ್ರುವರಿ 9ರಿಂದ ವಾರ್ಷಿಕ ಸ್ವಯಂಚಾಲಿತ ದರ ಜಾರಿಗೆ ಬರಲಿದೆ ಎಂದು ಈ ಹಿಂದೆ ಪ್ರಕಟಣೆ ನೀಡಲಾಗಿತ್ತು. ಈ ನಿರ್ಧಾರವನ್ನು ಮುಂದಿನ ಆದೇಶ ಬರುವವರೆಗೆ ಹಿಂತೆಗೆದುಕೊಳ್ಳಲಾಗಿದೆ. ಪರಿಷ್ಕೃತ ದರ ಕುರಿತು ಅಂತಿಮ ನಿರ್ಧಾರವನ್ನು ನಿರ್ದೇಶಕರ ಮಂಡಳಿಯ ಪರಿಶೀಲನೆಯ ನಂತರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.