ADVERTISEMENT

ಕೋವಿಡ್–19 ಹರಡದಂತೆ ಕ್ರಮ: ದ್ವಿತೀಯ ಪಿಯು ಇಂಗ್ಲಿಷ್‌ ಪರೀಕ್ಷೆಗೆ ಹೀಗಿದೆ ತಯಾರಿ

​ಪ್ರಜಾವಾಣಿ ವಾರ್ತೆ
Published 17 ಜೂನ್ 2020, 15:46 IST
Last Updated 17 ಜೂನ್ 2020, 15:46 IST

ಇದೇ 18ರಂದು ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ನಡೆಯಲಿದ್ದು, ಬೆಂಗಳೂರಿನ ಪರೀಕ್ಷಾ ಕೇಂದ್ರಗಳಲ್ಲಿ ಡೆಸ್ಕ್‌ಗಳ ಮೇಲೆ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಬರೆಯುವ ಕಾರ್ಯ ಮಂಗಳವಾರ ನಡೆಯಿತು. ಕೊರೊನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಕೊಠಡಿಯನ್ನು ಸ್ವಚ್ಛವಾಗಿ ಇಡಲಾಗಿದ್ದು, ಸಾಕಷ್ಟು ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.

 ಥರ್ಮಲ್ ಸ್ಕ್ರೀನಿಂಗ್ ಸಾಧನ ಮತ್ತು ಸ್ಯಾನಿಟೈಸರ್ ಗಳನ್ನು ಸಜ್ಜುಗೊಳಿಸಲಾಗಿದೆ. ಮಾರ್ಚ್ 23ರಂದು ನಡೆಯಬೇಕಿದ್ದ ಈ ಕೊನೆಯ ಪರೀಕ್ಷೆಯನ್ನು ಲಾಕ್ ಡೌನ್ ಕಾರಣ ಮುಂದೂಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT