ADVERTISEMENT

1,242 ಹುದ್ದೆಗಳ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪಟ್ಟಿ ಪ್ರಕಟ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಆಗಸ್ಟ್ 2022, 12:07 IST
Last Updated 20 ಆಗಸ್ಟ್ 2022, 12:07 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಯ್ಕೆಯಾದವರ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ.

ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯು ಮಾರ್ಚ್‌ 12ರಿಂದ 16ರವರೆಗೆ 26 ವಿವಿಧ ವಿಷಯಗಳಿಗೆ ನಡೆದಿತ್ತು.ಈ ಪರೀಕ್ಷೆ ಬರೆದ ಅಭ್ಯರ್ಥಿಗಳು ವಿಷಯವಾರು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ ಮೂಲಕ ನೋಡಬಹುದು.

ಅಧಿಕೃತ ವೆಬ್‌ಸೈಟ್‌: https://cetonline.karnataka.gov.in

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.