ಕೊಡಗು: ರಾಜ್ಯ ಕಂದಾಯ ಇಲಾಖೆಯ ಕೊಡಗು ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ಸಂಖ್ಯೆ: 35
ಸ್ಥಳ: ಕೊಡಗು ಜಿಲ್ಲೆಯಾದ್ಯಂತ
ವಿದ್ಯಾರ್ಹತೆ:ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ದ್ವೀತಿಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕಡ್ಡಾಯವಾಗಿಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ವೇತನ ಶ್ರೇಣಿ:₹21,400 (ಮೂಲ ವೇತನ)– ₹ 42,000 ಶ್ರೇಣಿಯಲ್ಲಿ ವೇತನ ನೀಡಲಾಗುವುದು.
ಅರ್ಜಿ ಶುಲ್ಕ: ಎಸ್ಸಿ, ಎಸ್ಸಿ ಹಾಗೂ ಪ್ರವರ್ಗ– 1 ಅಭ್ಯರ್ಥಿಗಳಿಗೆ ₹ 200, ಸಾಮಾನ್ಯ ವರ್ಗ, 2ಎ, 2ಬಿ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ ₹ 400.
ವಯೋಮಿತಿ
1) ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 35 ವರ್ಷ
2) ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 38 ವರ್ಷ
3) ಪ.ಜಾ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 40 ವರ್ಷ
ನೇಮಕಾತಿ ವಿಧಾನ:ದ್ವಿತೀಯ ಪಿಯುಸಿಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಮೀಸಲಾತಿ ಅನ್ವಯ ಅತಿಹೆಚ್ಚು ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನುದಾಖಲೆಪರಿಶೀಲನೆಗೆ ಕರೆಯಲಾಗುವುದು.
ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 19, 2022
ಹೆಚ್ಚಿನ ಮಾಹಿತಿಗೆ:https://kodagu-va.kar.nic.in
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.