ADVERTISEMENT

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ: ಅಧಿಕಾರಿ ಹುದ್ದೆಗಳ ಪ್ರವೇಶ ಪತ್ರ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2021, 12:43 IST
Last Updated 6 ನವೆಂಬರ್ 2021, 12:43 IST

ನವದೆಹಲಿ:ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಅಧಿಕಾರಿ ಹುದ್ದೆಗಳ (sco) ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.

ಅಧಿಕಾರಿಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು. ನವೆಂಬರ್‌ 15ರಂದು ಆನ್‌ಲೈನ್‌ ಪರೀಕ್ಷೆ ನಡೆಯಲಿದೆ.

ಪ್ರವೇಶ ಪತ್ರದಲ್ಲಿ ನೀಡಲಾದ ಸೂಚನೆಗಳನ್ನು ತಪ್ಪದೇ ಓದಿಕೊಂಡು ಪಾಲಿಸಬೇಕು ಎಂದು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಅಭ್ಯರ್ಥಿಗಳಲ್ಲಿ ಮನವಿ ಮಾಡಿದೆ.

ADVERTISEMENT

ಬ್ಯಾಂಕಿನ ಈwww.sbi.co.in/careersವೆಬ್‌ಸೈಟಿಗೆ ಲಾಗಿನ್‌ ಆಗಿ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.