ADVERTISEMENT

ಮೈಸೂರು: 151 ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ನೇಮಕಾತಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2022, 12:26 IST
Last Updated 26 ಫೆಬ್ರುವರಿ 2022, 12:26 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಂಗನವಾಡಿ ಕಾರ್ಯಕರ್ತೆಯಾಗಲು ಹತ್ತನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯರಾಗಲು ಕನಿಷ್ಠ 4ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು.

ಹುದ್ದೆಗಳ ಸಂಖ್ಯೆ: 151

ADVERTISEMENT

ಅಂಗನವಾಡಿ ಕಾರ್ಯಕರ್ತೆ: 22

ಅಂಗನವಾಡಿ ಸಹಾಯಕಿ: 129

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು...

1) ಮಾಹಿತಿಯನ್ನು ಭರ್ತಿ ಮಾಡಿದ ಅರ್ಜಿ (ಆನ್‌ಲೈನ್‌ )

2) ಜನನ ಪ್ರಮಾಣ ಪತ್ರ /ಜನ್ಮದಿನಾಂಕ ಇರುವ ಎಸ್ಎಸ್‌ಎಲ್‌ಸಿ ಅಂಕಪಟ್ಟಿ

3) ತಹಶೀಲ್ದಾರರು /ಉಪತಹಶೀಲ್ದಾರರು ಪಡೆದ 1 ವರ್ಷದೊಳಗಿನ ವಾಸಸ್ಥಳ ದೃಢೀಕರಣ

4) ಅಗತ್ಯ ಶೈಕ್ಷಣಿಕ ದಾಖಲೆ ಪತ್ರಗಳುನ್ನು ಲಗತ್ತಿಸಬೇಕು.

ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 22-03-2022

ಅರ್ಜಿ ಸಲ್ಲಿಸುವ ವೆಬ್‌ಸೈಟ್‌: https://anganwadirecruit.kar.nic.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.